ಜೊತೆ ಜೊತೆಯಲ್ಲಿ ಧಾರಾವಾಹಿಯ ಅನು ಸಿರಿಮನೆ ಪಾತ್ರದಲ್ಲಿ ಕಾಣಿಸಿಕೊಂಡು ಪ್ರೇಕ್ಷಕರ ಮನ ಗೆದ್ದಿದ್ದ ನಟಿ ಮೇಘಾ ಶೆಟ್ಟಿ ಸದ್ಯ ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ.
ಸಿನಿಮಾದ ಕೆಲಸಗಳಲ್ಲಿ ಸಖತ್ ಬ್ಯುಸಿಯಾಗಿರುವ ನಟಿ ಆಗಾಗ ತಮ್ಮ ಅದ್ಭುತ ಫೋಟೋ ಶೂಟ್ ಮೂಲಕ ಅಭಿಮಾನಿಗಳ ಮನಸ್ಸು ಕದಿಯುತ್ತಿದ್ದಾರೆ.
ಇದೀಗ ನಟಿ ಮೇಘಾ ಶೆಟ್ಟಿ ಬಳುಕುವ ಬಳ್ಳಿಯಂತಾಗಿದ್ದು ಸಖತ್ ಸ್ಟೈಲಿಶ್ ಆಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಅವುಗಳನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಮೇಘಾ ಶೆಟ್ಟಿ, ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟಿವ್ ಆಗಿದ್ದಾರೆ. ಆಗಾಗ ಲೇಟೆಸ್ಟ್ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ.
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಮೇಘಾ ಚಂದನವನ ಪ್ರವೇಶಿಸಿದರು. ನಂತರ ಡಾರ್ಲಿಂಗ್ ಕೃಷ್ಣ ಜೊತೆ ದಿಲ್ ಪಸಂದ್ ಚಿತ್ರದಲ್ಲಿ ನಟಿಸಿದರು.
ಇತ್ತೀಚಿಗಷ್ಟೇ ಕೈವ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಮೇಘಾ ಶೆಟ್ಟಿ, ಸದ್ಯ ವಿನಯ್ ರಾಜ್ಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ನೀಲಿ ಬಣ್ಣದ ಡ್ರೆಸ್ನಲ್ಲಿ ಬಳುಕುವ ಬಳ್ಳಿಯಂತೆ ಮೇಘಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ನಟಿಯ ಮಾಡ್ರನ್ ಲುಕ್ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ.