ಸ್ಯಾಂಡಲ್ವುಡ್ ಸಿಂಡ್ರೆಲ್ಲಾ, ನಟಿ ರಾಧಿಕಾ ಪಂಡಿತ್ ಸದ್ಯ ಚಿತ್ರರಂಗದಿಂದ ದೂರವಿದ್ದರು ಅವರ ಮೇಲಿನ ಕ್ರೇಜ್ ಮಾತ್ರ ಕೊಂಚವೂ ಕಮ್ಮಿಯಾಗಿಲ್ಲ. ಮದುವೆ, ಸಂಸಾರ, ಮಕ್ಕಳು ಅಂತಾ ಬ್ಯುಸಿಯಿದ್ದರು ಕೂಡ ಅಭಿಮಾನಿಗಳ ಜೊತೆ ಸದಾ ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕದಲ್ಲಿದ್ದಾರೆ. ಇಂದು (ಮಾ. 7) ರಾಧಿಕಾ ಪಂಡಿತ್ ಹುಟ್ಟುಹಬ್ಬವಿದ್ದು, ಆ ಪ್ರಯುಕ್ತ ನಟಿ ಫ್ಯಾನ್ಸ್ಗೆ ಸಂದೇಶ ನೀಡಿದ್ದಾರೆ.
ಪ್ರತಿ ವರ್ಷ ರಾಧಿಕಾ ಪಂಡಿತ್ ಅವರ ಹುಟ್ಟುಹಬ್ಬದ ದಿನದಂದು ಮನೆ ಮುಂದೆ ಅಭಿಮಾನಿಗಳು ಜಮಾಯಿಸುತ್ತಾರೆ. ಹಾಗಾಗಿ ಈ ಬಾರಿ ಮುಂಚಿತವಾಗಿಯೇ ತಾವು ಮನೆಯಿಂದ ದೂರ ಇರುವ ವಿಚಾರವನ್ನ ತಿಳಿಸಿದ್ದಾರೆ. ದೂರದ ಊರಲ್ಲಿ ಬರ್ತ್ಡೇ ಆಚರಿಸಿಕೊಳ್ಳುವುದಾಗಿ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ ಮನೆಯಿಂದ ದೂರ ಹೋಗಿ ಬರ್ತ್ಡೇ ಆಚರಿಸಿಕೊಳ್ಳಲಿದ್ದೇನೆ. ನನ್ನ ಪ್ರೀತಿಯ ಅಭಿಮಾನಿಗಳಿಗೆ ಇದರಿಂದ ಬೇಸರ ಆಗಬಹುದು ಎಂಬುದು ನನಗೆ ತಿಳಿದಿದೆ. ಹಾಗಾಗಿ ಇಲ್ಲಿ ಒಂದು ಆ್ಯಕ್ಟಿವಿಟಿ ಪ್ಲ್ಯಾನ್ ಮಾಡಿದ್ದೇನೆ. ಆ ಮೂಲಕ ನಿಮ್ಮ ಜೊತೆ ಸಂಪರ್ಕದಲ್ಲಿ ಇರಬಹುದು ಎಂದು ರಾಧಿಕಾ ಪಂಡಿತ್ ಪೋಸ್ಟ್ ಮಾಡಿದ್ದಾರೆ.
ರಾಧಿಕಾ ಪಂಡಿತ್ ಹಂಚಿಕೊಂಡಿರುವ ಈ ಪೋಸ್ಟ್ಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮುಂಚಿತವಾಗಿ ಎಲ್ಲರೂ ಬರ್ತ್ಡೇ ವಿಶ್ ತಿಳಿಸುತ್ತಿದ್ದಾರೆ. ರಾಧಿಕಾ ಎಲ್ಲಿಗೆ ತೆರಳುತ್ತಿದ್ದಾರೆ ಎಂಬುದು ತಿಳಿದು ಬಂದಿಲ್ಲ.