ಬಾಲಿವುಡ್ ನಟಿ ರಾಖಿ ಸಾವಂತ್ ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೆ ಇರುತ್ತಾರೆ. ಮಾಜಿ ಪತಿ ಆದಿಲ್ ನಿಂದ ದೂರವಾದ ಬಳಿಕ ಇದೀಗ ಮತ್ತೋರ್ವ ಮಾಜಿ ಪತಿ ರಿತೇಶ್ ಜೊತೆ ಕಾಣಿಸಿಕೊಂಡಿದ್ದಾರೆ.
ಕ್ಯಾಮೆರಾ ಕಣ್ಣಿಗೆ ಮಾಜಿಪತಿಯ ಜೊತೆ ಕಾಣಿಸಿಕೊಂಡಿರುವ ರಾಖಿ, ಈ ಇಬ್ಬರೂ ಸೇರಿ ಆದಿಲ್ ಮೇಲೆ ಆರೋಪ ಮಾಡಿದ್ದಾರೆ. ಕೋರ್ಟ್ ವಿಷಯದಲ್ಲಿ ಆದಿಲ್ ಸುಳ್ಳು ಹೇಳುತ್ತಿದ್ದಾನೆ. ನಾನು ಜೈಲಿಗೆ ಹೋಗಲಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾನೆ. ನಾನು ಅದನ್ನು ಕೇಳಿ ಮಜಾ ಮಾಡುತ್ತಿದ್ದೇನೆ ಎಂದಿದ್ದಾರೆ ರಾಖಿ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಬಾಲಿವುಡ್ ನಟಿ ರಾಖಿ ಸಾವಂತ್ ಬಾಂಬೆ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ಜಾಮೀನು ನೀಡಬೇಕು ಎಂದು ರಾಖಿ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಈಗಾಗಲೇ ತಿರಸ್ಕರಿಸಿದೆ. ಸದ್ಯ ರಾಖಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.