ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಆರಂಭದ ಹೊತ್ತಲ್ಲೇ ಶಿವಸೇನೆಯ ಆದಿತ್ಯ ಠಾಕ್ರೆ ಉದ್ದಟತನದ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಮಹಾ ವಿಕಾಸ ಅಘಾಡಿ ಒಕ್ಕೂಟ ಮಾಡಿಕೊಂಡಿರುವ ಶಿವಸೇನೆ ಶಾಸಕ ಆದಿತ್ಯ ಠಾಕ್ರೆ ಇದೀಗ ಗಡಿ ವಿವಾದದಲ್ಲಿ ಮತ್ತೆ ಖ್ಯಾತೆ ತೆಗೆದಿದ್ದಾರೆ.
ಮಹಾರಾಷ್ಟ್ರ ಮಾಜಿ ಸಿಎಂ ಉದ್ದವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಬೆಳಗಾವಿ ಗಡಿಯ ವಿವಾದದಲ್ಲಿ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
ಜೊತೆಗೆ ಗಡಿ ವಿವಾದ ಇತ್ಯರ್ಥವಾಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕೆಂದು ಉದ್ದತಟನದ ಮಾತುಗಳನ್ನಾಡಿದ್ದಾರೆ. ಉದ್ದವ್ ಠಾಕ್ರೆ ನೇತೃತ್ವದ ಬಣ ಬೆಳಗಾವಿ ಗಡಿ ವಿಚಾರ ಕೆದಕುವುದು ಹೊಸದೇನಲ್ಲ. ಭಾಷಾ ವಿಷ ಬೀಜ ಬಿತ್ತುತ್ತಿದ್ದ ಉದ್ಧವ ಠಾಕ್ರೆ ಈಗ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳುವ ಮೂಲಕ ಮತ್ತೆ ಕ್ಯಾತೆ ತೆಗೆದಿದ್ದಾರೆ.