ಮಣಿಪುರ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗಿವೆ ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್ ತಿಳಿಸಿದ್ದಾರೆ.
‘ಸೂಕ್ಷ್ಮ ಪ್ರದೇಶಗಳಲ್ಲಿ ರಾಜ್ಯ ಭದ್ರತಾ ಪಡೆ ಹಾಗೂ ಅರೆಸೇನಾ ಪಡೆಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಸಾಕಷ್ಟು ದಿನಗಳಿಂದ ಮುಚ್ಚಲಾಗಿದ್ದು ಶಾಲೆಗಳು ಇಂದಿನಿಂದ ಆರಂಭವಾಗಲಿದೆ. ಒಂದರಿಂದ ಎಂಟರವರೆಗಿನ ತರಗತಿಗಳು ಆರಂಭವಾಗಲಿವೆ ಎಂದು ತಿಳಿಸಿದ್ದಾರೆ.
ಐದು ಜಿಲ್ಲೆಗಳಲ್ಲಿ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ. ಒಂದರಿಂದ ಎಂಟರವರೆಗಿನ ತರಗತಿಗಳನ್ನು ತೆರೆಯಲು ನಿರ್ಧರಿಸಲಾಗಿದೆ’ ಎಂದು ಬೀರೇನ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದು, ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದರಿಂದ ಮೇ ಮೊದಲ ವಾರದಿಂದಲೇ ಶಾಲೆಗಳು ಮುಚ್ಚಲಾಗಿತ್ತು. ಇದೀಗ ಪರಿಸ್ಥಿತಿ ಕೊಂಚ ಶಾಂತ ಸ್ಥಿತಿಗೆ ಮರಳಿದ್ದು ಈ ಹಿನ್ನೆಲೆಯಲ್ಲಿ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ.