ಹಾಲಿನ ದರ ಹೆಚ್ಚಳದಿಂದ ಹೋಟೆಲ್ಗಳಲ್ಲಿ ಕಾಫಿ, ಚಹಾ ಮತ್ತಿತರ ಪಾನೀಯಗಳ ದರ ಏರಿಕೆಯಾಗಬುದೆಂದು ಗ್ರಾಹಕರು ಆತಂಕದಲ್ಲಿದ್ದಾರೆ. ಹೀಗಾಗಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳ ಸಂಘ ಈ ಬಗ್ಗೆ ಸ್ಪಷ್ಟನೆ ನೀಡಿದೆ.
ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಕಾಫಿ ಮತ್ತು ಚಹಾದ ಬೆಲೆಯನ್ನು ಹೆಚ್ಚಿಸುವುದಿಲ್ಲ ಎಂದು ಸಂಘ ಹೇಳಿದೆ. ಕೆಎಂಎಫ್ ಹಾಲಿನ ದರವನ್ನು ಹೆಚ್ಚಿಸಿಲ್ಲ. ಅರ್ಧ / ಒಂದು ಲೀಟರ್ ಪ್ಯಾಕೆಟ್ಗೆ 50 ಎಂಎಲ್ ಹಾಲು ಹೆಚ್ಚು ಸೇರಿಸಿದೆ ಮತ್ತು ಅದಕ್ಕೆ ಹೆಚ್ಚು ಶುಲ್ಕ ವಿಧಿಸುತ್ತಿದೆ. ಇದರಿಂದ ಹೋಟೆಲ್ ಮಾಲೀಕರಿಗೆ ಹೆಚ್ಚಿನ ವ್ಯತ್ಯಾಸವಾಗುವುದಿಲ್ಲ ಎಂದು ಎಂದು ಸಂಘದ ಅಧ್ಯಕ್ಷ ಪಿಸಿ ರಾವ್ ಹೇಳಿದ್ದಾರೆ.
ವಾಸ್ತವದಲ್ಲಿ ನಾವು ಕಡಿಮೆ ಹಾಲು ಖರೀದಿಸುತ್ತೇವೆ. ಉದಾಹರಣೆಗೆ, ಈ ಹಿಂದೆ ಒಂದು ಹೋಟೆಲ್ 100 ಲೀಟರ್ ಖರೀದಿಸಿಸುತ್ತಿದ್ದರೆ, ಅದು ಈಗ ಕೇವಲ 95 ಲೀಟರ್ ಖರೀದಿಸುತ್ತಿದೆ. ಹೆಚ್ಚುವರಿ ವೆಚ್ಚವನ್ನು ಗ್ರಾಹಕರಿಗೆ ವರ್ಗಾಯಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.