ಬೆಂಗಳೂರು: ಕೃಷಿ ಇಲಾಖೆ ಜವಾಬ್ದಾರಿ ವಹಿಸಿಕೊಂಡ ಬಳಿಕ ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಕೃಷಿ ಸಚಿವ ಚಲುವರಾಯಸ್ವಾಮಿ ನಿನ್ನೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಈ ವೇಳೆ ಇಲಾಖೆಯ ಯೋಜನೆಗಳು, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. ಪೂರ್ವ ಮುಂಗಾರಿನಲ್ಲಿ ವಾಡಿಕೆಯಾಗಿ 108 ಮಿಲಿ ಮೀಟರ್ ಮಳೆಯಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 108 ಮಿಮೀ ಮಳೆಯಾಗಿದ್ದು, ಯಾವುದೇ ಕೊರತೆ ಆಗಿರುವುದಿಲ್ಲ. 2022-23ನೇ ಸಾಲಿನ ಮೂರನೇ ಮುಂಗಡ ಅಂದಾಜಿನಂತೆ 139.28 ಲಕ್ಷ ಟನ್ಗಳಷ್ಟು ಆಹಾರ ಧಾನ್ಯಗಳ ಉತ್ಪಾದನೆಯನ್ನು ಅಂದಾಜಿಸಲಾಗಿದೆ. 2023ರ ಮುಂಗಾರು ಹಂಗಾಮಿನಲ್ಲಿ 82.35 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಇದೆ. ರೈ
ತರ ಸಮಸ್ಯೆ ನಮ್ಮ ಮೊದಲ ಆದ್ಯತೆಯಾಗಿದೆ. ರೈತರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದೇವೆ. ಪೂರ್ವ ಮುಂಗಾರು ಬೆಳೆಗಳ 2.95 ಲಕ್ಷ ಹೆಕ್ಟೇರ್ ಗುರಿಯಿದ್ದು, ಇದುವರೆಗೆ 2.48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೈಗೊಳ್ಳಲಾಗಿರುತ್ತದೆ.
5.54 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳ ಬೇಡಿಕೆಯಿದ್ದು, 7.85 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳು ಲಭ್ಯವಿದೆ. ಬಿತ್ತನೆ ಬೀಜದಲ್ಲಿ ಯಾವುದೇ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು.