ಕರ್ನಾಟಕದಾದ್ಯಂತ ಗುರುವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 56 ಕಡೆಗಳಲ್ಲಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.
ಬೆಳಗಾವಿ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಶೇಖರಗೌಡ ಮನೆ ಮೇಲೆ ದಾಳಿ ನಡೆದಿದೆ.
ಇವರು ಧಾರವಾಡದಲ್ಲಿ ಎರಡು ಕಡೆ ಪಿಜಿಗಳನ್ನು ಹೊಂದಿದ್ದಾರೆ. ಕೆಸಿಡಿ ರಸ್ತೆಯ ಸಪ್ತಾಪುರ ಹಾಗೂ ರಾಧಾಕೃಷ್ಣ ನಗರದಲ್ಲಿ ಈ ಪಿಜಿಗಳಿದ್ದು, ಎರಡೂ ಸ್ಥಳಗಳಲ್ಲೂ ಏಕಕಾಲಕ್ಕೆ ದಾಳಿ ನಡೆದಿದೆ.