ಮಂಡ್ಯ: ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಯುತ್ತಿದೆ. ಈಅಗಲಿದ ನಾಯಕನ ದರ್ಶನಕ್ಕೆ ಅಪಾರ ರಾಜಕೀಯ ನಾಯಕರು, ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸುವ ಸಾಧ್ಯತೆ ಇದ್ದು, ಅಂತ್ಯಕ್ರಿಯೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಡಿಐಜಿ ಬೋರಲಿಂಗಯ್ಯ, ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಸುಮಾರು 700ಕ್ಕೂ ಹೆಚ್ಚು ಸಿಬ್ಬಂದಿಗಳು, ಕೆಎಸ್ಆರ್ಪಿ, ಡಿಎಆರ್ ತುಕಡಿ ಸೇರಿದಂತೆ 1000 ಕ್ಕೂ ಅಧಿಕ ಪೊಲೀಸರ ನಿಯೋಜಿಸಲಾಗಿದ್ದು, ಎಲ್ಲೆಡೆ ಬ್ಯಾರೀಕೇಡ್ ಅಳವಡಿಸಲಾಗಿದೆ.
ಇಬ್ಬರು ಎಸ್ ಪಿ, ಮೂವರು ಎಎಸ್ಪಿ, ಹತ್ತು ಮಂದಿ ಡಿಎಸ್ ಪಿ, ಮೂವತ್ತೊಂದು ಪಿಐ, ಎಪ್ಪತ್ತು ಪಿಎಸ್ವೈ, 700 ಪೊಲೀಸ್ ಸಿಬ್ಬಂದಿ, 200 ಹೋಮ್ ಗಾರ್ಡ್, 6 ಕೆ ಎಸ್ ಅರ್ ಪಿ, 6 ಡಿಎಆರ್ ಸೇರಿ ಸಾವಿರ ಹೆಚ್ಚು ಸಿಬ್ಬಂದಿ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.