ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಒಂದು ಕುಟುಂಬದ (Family) ಎಲ್ಲಾ ಸಹೋದರರು ಒಂದೇ ಹುಡುಗಿಯನ್ನು ಮದುವೆ (Marriage) ಯಾಗುತ್ತಾರೆ. ಈ ಪದ್ಧತಿ ಬಹಳ ಹಳೆಯದಾಗಿದ್ದು, ಈ ಪದ್ಧತಿಯನ್ನು ಘೋಟುಲ್ ಆಚರಣೆ ಎಂದು ಕರೆಯಲಾಗುತ್ತದೆ. ಇದು ನಿನ್ನೆ ಮೊನ್ನೆಯ ಪದ್ಧತಿಯಲ್ಲ. ಹಿಮಾಚಲ ಪ್ರದೇಶ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಈ ರೀತಿಯ ಒಂದಷ್ಟು ವಿಚಿತ್ರ ಮದುವೆಯ ಸಂಪ್ರದಾಯಗಳು ಆಚರಣೆಯಲ್ಲಿವೆ. ಅದರಲ್ಲೂ ಭಾರತದ ಹಿಮಾಚಲ ಪ್ರದೇಶದಲ್ಲಿ ನಡೆಯುತ್ತಿರುವಂತಹ ಈ ವಿಚಿತ್ರವಾದ ವಿವಾಹ ಪದ್ಧತಿ ಎಂಥವರಿಗಾದ್ರೂ ಗಾಬರಿ ಮೂಡಿಸುತ್ತೆ.
ಈ ಸಂಪ್ರದಾಯದ ಪ್ರಕಾರ, ಎಲ್ಲಾ ಸಹೋದರರು ಒಂದೇ ಹುಡುಗಿ (Girl)ಯನ್ನು ಮದುವೆಯಾಗುತ್ತಾರೆ. ಜನಪ್ರಿಯ ನಂಬಿಕೆಯ ಪ್ರಕಾರ, ಪಾಂಡವರು ತಮ್ಮ ಪತ್ನಿ ದ್ರೌಪದಿ ಮತ್ತು ತಾಯಿ ಕುಂತಿಯೊಂದಿಗೆ ಮಹಾಭಾರತದ ಅವಧಿಯಲ್ಲಿ ಕಿನ್ನೌರ್ ಜಿಲ್ಲೆಯ ಗುಹೆ (Cave)ಗಳಲ್ಲಿ ವಾಸಿಸುತ್ತಿದ್ದರು. ಅಂದಿನಿಂದ ಇಲ್ಲಿ ಈ ಪದ್ಧತಿ ನಡೆದುಕೊಂಡು ಬಂದಿದೆ ಎನ್ನಲಾಗಿದೆ. ಸಹೋದರರಲ್ಲಿ (Brothers) ದೊಡ್ಡಣ್ಣ ಮದುವೆಯ ಎಲ್ಲಾ ಶಾಸ್ತ್ರಗಳನ್ನು ನೋಡಿಕೊಳ್ಳುತ್ತಾನೆ. ಆ ಒಂದು ಹುಡುಗಿ ಇರುವ ಎಲ್ಲಾ ಸಹೋದರರನ್ನು ಮದುವೆ ಆಗುತ್ತಾಳೆ. ಆದರೆ ಈ ಮದುವೆಯ ನಂತ ಆಕೆ ಯಾರೊಂದಿಗೆ ಸಂಸಾರವನ್ನು ಮಾಡುತ್ತಾಳೆ ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿಯಿಲ್ಲ.