ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್ ಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿರುವ ಆರೋಪ ಕೇಳಿ ಬಂದಿದ್ದು ಸಂಧ್ಯಾ, ಪವಿತ್ರಾ ನಾಗರಾಜ್ ಎಂಬುವವರ ವಿರುದ್ದ ದೂರು ದಾಖಲಾಗಿದೆ. ಸಂಧ್ಯಾ, ಪವಿತ್ರಾ ನಾಗರಾಜ್ ಎಂಬುವವರು ಬೆದರಿಕೆ ಹಾಕಿ 10 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆಂದು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ದ ಭಾಸ್ಕರ್ ಪ್ರಸಾದ್ ಅವರು ದೂರು ದಾಖಲಿಸಿದ್ದಾರೆ.
2 ವರ್ಷಗಳ ಹಿಂದೆ ಹೋರಾಟ, ಪ್ರತಿಭಟನೆಗಳಲ್ಲಿ ಪರಿಚಯವಾದ ಪವಿತ್ರಾ ಹಾಗೂ ಸಂಧ್ಯಾ ಎಂಬ ಇಬ್ಬರು ಯುವತಿಯರು ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್ ಅವರಿಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಭಾಸ್ಕರ್ ಅವರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.
ಕಳೆದ ಆಗಸ್ಟ್ 8 ರಂದು ವಾಟ್ಸಾಪ್ ನಲ್ಲಿ ಲೈಂಗಿಕ ಸಂಪರ್ಕಕ್ಕೆ ಆಹ್ವಾನಿಸಲಾಗಿತ್ತುನಂತರ ಆ ವಾಟ್ಸಾಪ್ ಹಾಗೂ ವಿಡಿಯೋಗಳನ್ನ ಇಟ್ಕೊಂಡು ಮಾನಹರಣ ಮಾಡೋದಾಗಿ ಬೆದರಿಕೆ ಆರೋಪ.ನಂತರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕೋದಾಗಿ ಬೆದರಿಸಿ 10 ಲಕ್ಷ ಹಣಕ್ಕೆ ಡಿಮ್ಯಾಂಡ್. ನಂತರ ನೇರವಾಗಿ ಸಿಕ್ಕಾಗ ಅಪಪ್ರಚಾರ ಮಾಡಿ, ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಭಾಸ್ಕರ್ ಪ್ರಸಾದ್ ಅವರು ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ 10 ಲಕ್ಷ ಹಣ ನೀಡದಿದ್ದರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.