ಹೆಣ್ಣು ಮಗುವನ್ನು ಅಕ್ರಮವಾಗಿ ಮನೆಯಲ್ಲಿ ಇಟ್ಟುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಸೋಷಿಯಲ್ ಮೀಡಿಯಾದಲ್ಲಿ ಖ್ಯಾತಿ ಘಳಿಸಿದ ಸೋನು ಶ್ರೀನಿವಾಸ್ ಗೌಡರನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಗೌಡ ಫಸ್ಟ್ ಪ್ರತಿಕ್ರಿಯೆ ನೀಡಿದ್ದಾರೆ.
ಲೀಗಲ್ ಆಗಿ ತನಿಖೆ ನಡೆಯುತ್ತಿದೆ. ಏನೂ ತೊಂದರೆ ಇಲ್ಲ. ಒಂದು ಹುಡುಗಿಯನ್ನು ರಕ್ಷಣೆ ಮಾಡೋಕೆ ಅಂತ ನಾನು ಕರೆದುಕೊಂಡು ಬಂದಿದ್ದು. ಅವಳು ಈಗಲೂ ಆರಾಮಾಗಿ, ಸುರಕ್ಷಿತವಾಗಿ ಇದ್ದಾಳೆ ಎಂದು ಸೋನು ಗೌಡ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರನ್ನು ರಾಯಚೂರಿಗೆ ಕರೆದುಕೊಂಡು ಹೋಗಿ ಪೊಲೀಸರು ತನಿಖೆ ಮಾಡಲಿದ್ದಾರೆ. ಮಾರ್ಚ್ 25ರಂದು ಅವರನ್ನು ಕೋರ್ಟ್ಗೆ ಹಾಜರು ಪಡಿಸಬೇಕಿದೆ. ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಸಂಬಂಧ ಸೋನು ಗೌಡ ಮೇಲೆ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.