ಮಹದೇವಪುರ: ಚುನಾವಣಾ ಗುರುತಿನ ಚೀಟಿ ಸೇರಿದಂತೆ ಹಲವು ವಿಚಾರಗಳನ್ನು ಯುವ ಕಾಂಗ್ರೆಸ್ ಮುಖಂಡರು ಮಾಹಿತಿ ನೀಡುತ್ತಿದ್ದು ವಿನಾಕಾರಣ ಕಾಂಗ್ರೆಸ್ ಕಾರ್ಯಕರ್ತರನ್ನು ವೈಟ್ ಫೀಲ್ಡ್ ಪೊಲೀಸರು ಬಂಧಿಸಿ ಅವರ ಮೇಲೆ ಸುಳ್ಳು ಕೇಸು ದಾಖಲಿಸಲು ಮುಂದಾಗಿದ್ದಾರೆ ಎಂದು ಶಾಸಕ ಹೆಚ್ ನಾಗೇಶ್ ಅವರ ನೇತೃತ್ವದಲ್ಲಿ ವೈಟ್ ಫೀಲ್ಡ್ ಪೊಲೀಸ್ ಠಾಣೆ ಎದುರು ಕ್ಷೇತ್ರದ ಬ್ಲಾಕ್ ಅಧ್ಯಕ್ಷರುಗಳೊಂದಿಗೆ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಪಕ್ಷ ನೀಡಿರುವ ಕಾಂಗ್ರೆಸ್ ಗ್ಯಾರಂಟಿ ಪಾಂಪ್ಲೇಟ್ಗಳನ್ನು ಹಂಚಲು ಬಿಜೆಪಿಗರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿದ ಹೆಚ್
ನಾಗೇಶ್, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಹಾಯಕ ಪೊಲೀಸ್ ಆಯುಕ್ತ ಎಂ.ಬಾಬು ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಪಾಲಿಕೆ ಮಾಜಿ ಸದಸ್ಯ ಉದಯ್ ಕುಮಾರ್, ಬ್ಲಾಕ್ ಅಧ್ಯಕ್ಷರಾದ ಅನಿಲ್, ಬಾಬುಗೌಡ, ವಿಟಿಬಿ ಬಾಬುರೆಡ್ಡಿ, ಮಹಿಳಾ ಅಧ್ಯಕ್ಷರುಗಳು, ಮುಖಂಡರಾದ ಸಾದರಮಂಗಲ ಲೋಕೇಶ್ ರೆಡ್ಡಿ, ವರ್ತೂರು ರಾಜು, ಎಂಸಿಸಿ ರವಿ, ಶ್ರೀನಿವಾಸರೆಡ್ಡಿ, ಕಾಡು ಸೊಣಪ್ಪನಹಳ್ಳಿಮದು ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.