ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ N.R.ರಮೇಶ್ ಅವರು, ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮವಾಗಿ ಮತದಾರರ ಸೇರ್ಪಡೆ ಮಾಡಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಕೆ ಮಾಡಿದ್ದಾರೆ. ಗುರಪ್ಪನಪಾಳ್ಯ ವಾರ್ಡ್, ಜಯನಗರ ಪೂರ್ವ ಮತ್ತು ಭೈರಸಂದ್ರ ವಾರ್ಡ್ಗಳ ವ್ಯಾಪ್ತಿಯಲ್ಲಿ 9 ತಿಂಗಳ ಅವಧಿಯಲ್ಲಿ ಸುಮಾರು 9,153ಕ್ಕೂ,
ಹೆಚ್ಚು ಜನರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಈ ಪೈಕಿ ಶೇ. 50% ಕ್ಕೂ ಹೆಚ್ಚು ಮಂದಿ ತಮಿಳುನಾಡಿನ ಹೊಸೂರು, ಧರ್ಮಪುರಿ ಮತ್ತು ಕೃಷ್ಣಗಿರಿ ಭಾಗದವರಾಗಿದ್ದಾರೆ. ನಕಲಿ ಮತದಾರರ ಸೇರ್ಪಡೆಗೆ ಅಧಿಕಾರಿಗಳು ಹಣ ಪಡೆದಿದ್ದಾರೆ ಎಂದು ಆರೋಪಿಸಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ N.R.ರಮೇಶ್ ದೂರು ಸಲ್ಲಿಸಿದ್ದಾರೆ.