ಜೈಪುರ್: ಎರಡು ವರ್ಷಗಳ ಹಿಂದೆ ಬಾರ್ಮರ್ನ ಮಾಜಿ ಶಾಸಕ ಹಾಗೂ ಕಾಂಗ್ರೆಸ್ (Congress) ಮುಖಂಡ ಮೇವರಂ ಜೈನ್ (Mevaram Jain) ಮತ್ತು ಆರ್ಪಿಎಸ್ ಅಧಿಕಾರಿ ಆನಂದ್ ಸಿಂಗ್ ರಾಜಪುರೋಹಿತ್ ಸೇರಿದಂತೆ ಒಂಬತ್ತು ಮಂದಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದು, ತನ್ನ ಮಗಳಿಗೂ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯೊಬ್ಬಳು ಆರೋಪಿಸಿ ಪ್ರಕರಣ ದಾಖಲಿಸಿದ್ದಾಳೆ.
ಆರೋಪಿಗಳು ತನ್ನ ಅಪ್ರಾಪ್ತ ವಯಸ್ಸಿನ ಸ್ನೇಹಿತೆ ಮೇಲೆ ಅತ್ಯಾಚಾರ ಎಸಗಿದ್ದು, ಇತರ ಹುಡುಗಿಯರನ್ನು ತಮ್ಮ ಬಳಿಗೆ ಕರೆತರುವಂತೆ ತನ್ನ ಮೇಲೆ ಒತ್ತಡ ಹೇರಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಜೋಧಪುರದ ರಾಜೀವ್ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಲ್ಲಿ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳಾದ ಬಾರ್ಮರ್ ಎಸ್ಎಚ್ಒ ಗಂಗಾರಾಮ್ ಖಾವಾ ಮತ್ತು ಸಬ್ ಇನ್ಸ್ಪೆಕ್ಟರ್ ದೌದ್ ಖಾನ್ ಹಾಗೂ ಪ್ರಧಾನ್ ಗಿರ್ಧಾರಿ ಸಿಂಗ್ ಸೋಧಾ ಸೇರಿದ್ದಾರೆ.