ತಿರುವನಂತಪುರಂ: 2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅಥವಾ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಅವರನ್ನು ಪ್ರಧಾನಿಯಾಗಿ ನಾಮನಿರ್ದೇಶನ ಮಾಡಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಶಶಿ ತರೂರ್ ಹೇಳಿದ್ದಾರೆ.
ಪ್ರತಿಪಕ್ಷಗಳ ಒಕ್ಕೂಟದ ಉಪಸ್ಥಿತಿಯಿಂದಾಗಿ ಮುಂದಿನ ವರ್ಷದ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶದ ಸಾಧ್ಯತೆಯನ್ನು ತರೂರ್ ಸೂಚಿಸಿದ್ದಾರೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಯನ್ನು ಸೋಲಿಸುವ ಮೂಲಕ ಇಂಡಿಯಾ ಮೈತ್ರಿಕೂಟವು ಕೇಂದ್ರದಲ್ಲಿ ಅಧಿಕಾರವನ್ನು ವಶಪಡಿಸಿಕೊಳ್ಳುವ ಅವಕಾಶವಿದೆ ಎಂದಿದ್ದಾರೆ