ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಇತ್ತ ದರ್ಶನ್ ರನ್ನು ಬಿಡಿಸಿಕೊಂಡು ಬರಲು ಅವರ ಪತ್ನಿ ವಿಜಯಲಕ್ಷ್ಮಿ ಟೆಂಪಲ್ ರನ್ ಮಾಡ್ತಿದ್ದಾರೆ. ಮತ್ತೊಂದು ಕಡೆ ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳು ದರ್ಶನ್ ಗಾಗಿ ದೇವರ ಮೊರೆ ಹೋಗಿದ್ದಾರೆ. ಅಂತೆಯೇ ಅರ್ಚಕರೊಬ್ಬರು ದೇವಸ್ಥಾನದಲ್ಲೇ ದರ್ಶನ್ ಫೋಟೋ ಇಟ್ಟು ಪೂಜೆ ಮಾಡಿ ಕೆಲಸ ಕಳೆದುಕೊಂಡಿದ್ದಾನೆ.
ಬಳ್ಳಾರಿ ಜಿಲ್ಲೆಯ ಕುರುಗೋಡಿನ ಬಸವೇಶ್ವರ ದೇಗುಲದಲ್ಲಿ ದರ್ಶನ್ ಫೋಟೋ ಇಟ್ಟು ಪೂಜೆ ಮಾಡಿದ್ದಕ್ಕೆ ಅರ್ಚಕ ಮಲ್ಲಿ ಎನ್ನುವರನ್ನು ಧಾರ್ಮಿಕ ದತ್ತಿ ಇಲಾಖೆ ಅಮಾನತು ಮಾಡಿದೆ.
ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ಮಲ್ಲಿ ಎಂಬ ಅರ್ಚಕ ನಟ ದರ್ಶನ್ ಪೋಟೊ ಇಟ್ಟು ಪೂಜೆ ಮಾಡಿ, ಮಂಗಳಾರತಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಸಂಪ್ರದಾಯಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಕ್ಕೆ ಧಾರ್ಮಿಕ ದತ್ತಿ ಇಲಾಖೆ ಅರ್ಚಕನನ್ನು ಅಮಾನತುಗೊಳಿಸಿದೆ.
ಅರ್ಚಕ ಮಲ್ಲಿ ದೇವಸ್ಥಾನದ ರೂಢಿ ಸಂಪ್ರದಾಯಕ್ಕೆ ಧಕ್ಕೆ ಹಾಗೂ ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಧಾರ್ಮಿಕ ದತ್ತಿ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಹನುಮಂತಪ್ಪರವರು ಅರ್ಚಕ ಮಲ್ಲಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಈ ಘಟನೆಯ ವಿಚಾರಣೆ ಮುಗಿಯುವವರೆಗೂ ದೇವಸ್ಥಾನಕ್ಕೆ ಬಾರದಂತೆ ನಿಷೇಧ ಹೇರಿದ್ದಾರೆ.