ಅಮೆರಿಕದ ಅರಿಜೋನಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತ ಮೂಲದ ಇಬ್ಬರು ವಿದ್ಯಾರ್ಥಿ ಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ..
ಏ..20ರಂದು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು ಪರಿಣಾಮ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ತೆಲಂಗಾಣದ ಕರೀಂನಗರ ಜಿಲ್ಲೆಯ ಮುಕ್ಕ ನಿವೇಶ್(19) ಹಾಗೂ ಜನ ಗಾಂವ್ ಜಿಲ್ಲೆಯ ಗೌತಮ್ ಪಾರ್ಸಿ(19) ಎಂದು ಗುರುತಿಸ ಲಾಗಿದೆ. ಮೃತರು ಅರಿಜೋನಾ ವಿವಿಯಲ್ಲಿ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.