ಬೆಂಗಳೂರು: ಫೆಬ್ರವರಿ 9 ಮತ್ತು 10 ರಂದು ಎರಡು ದಿನ ಕೇಂದ್ರ ಸಚಿವ ಅಮಿತ್ ಶಾ ಮೈಸೂರು ಮತ್ತು ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಇದೆ ವೇಳೆ ಸುತ್ತೂರು ಜಾತ್ರಾ ಮಹೋತ್ಸವದಲ್ಲೂ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ಅಮಿತ್ ಶಾ ರಾಜ್ಯ ನಾಯಕರ ಜೊತೆ ಸರಣಿ ಸಭೆ ನಡೆಸಲಿದ್ದಾರೆ.
ತಮ್ಮ ಭೇಟಿಯ ಸಂದರ್ಭದಲ್ಲಿ ಅವರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.
ಅಲ್ಲದೆ, ಲೋಕಸಭೆ ಚುನಾವಣೆಯ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಸ್ಥಾನಗಳ ಹಂಚಿಕೆ, ಪಕ್ಷದಲ್ಲಿನ ಆಂತರಿಕ ಶಮನ ಯತ್ನ ಮಾಡುವ ಸಾಧ್ಯತೆ ಇದೆ.