ನವದೆಹಲಿ:- ಈಶ್ವರಪ್ಪ ಚುನಾವಣೆಗೆ ನಿಲ್ಲಲಿ, ರಾಘವೇಂದ್ರ ಸೋಲಲಿ ಎಂದು ಅಮಿತ್ ಶಾ ಸಂದೇಶ ನೀಡಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಪರೋಕ್ಷವಾಗಿ ಅಮಿತ್ ಶಾ ಸಮ್ಮತಿ ಸಿಕ್ಕಿದೆ. ಅಪ್ಪ, ಮಕ್ಕಳನ್ನು ಸೋಲಿಸಬೇಕಿದೆ. ಈಶ್ವರಪ್ಪ ಚುನಾವಣೆಗೆ ನಿಲ್ಲಲಿ, ರಾಘವೇಂದ್ರ ಚುನಾವಣೆಯಲ್ಲಿ ಸೋಲಲಿ. ಈ ಸಂದೇಶವನ್ನು ಕೇಂದ್ರ ಸಚಿವ ಅಮಿತ್ ಶಾ ನೀಡಿದ್ದಾರೆ ಎಂದು ಹೇಳಿದ್ದಾರೆ.