ಬೆಂಗಳೂರು ;- ಲವ್ ಮಾಡುವಾಗ ಮದುವೆ ಆಗುವುದಾಗಿ ಹೇಳಿ ಬಳಿಕ ಮದುವೆ ಆಗದಿದ್ದರೆ ಅದು ವಂಚನೆ ಅಲ್ಲ ಎಂದು ಬೆಂಗಳೂರಿನ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕ್ರಿಮಿನಲ್ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಪ್ರಕರಣದಲ್ಲಿ ಆರೋಪಿಯು ಸಂತ್ರಸ್ತೆ ಎಂದಿರುವವರಿಗೆ ಪ್ರೀತಿಸುವ ಸಂದರ್ಭದಲ್ಲಿ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಇದಾದ ಬಳಿಕ ಇಬ್ಬರ ನಡುವಿನ ಸಂಬಂಧ ದೂರವಾಗಿದೆ. ಈ ಪ್ರಕ್ರಿಯೆಯನ್ನು ವಂಚನೆ ಆರೋಪದಲ್ಲಿ ವ್ಯಾಪ್ತಿಗೆ ತರಲಾಗುವುದಿಲ್ಲ. ಅಲ್ಲದೆ, ಅರ್ಜಿದಾರರನ್ನು ವಂಚನೆ ಆರೋಪದಲ್ಲಿ ಅಪರಾಧಿ ಎಂದು ನಿರ್ಣಯಿಸಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.
ಜೊತೆಗೆ, ಪ್ರಸ್ತುತ ಪ್ರಕರಣದಲ್ಲಿ ವಯಸ್ಕರಾದ ಸಂತ್ರಸ್ತೆ ಮತ್ತು ಅರ್ಜಿದಾರರು ಒಟ್ಟಾಗಿ ತಿರುಗಾಡಿದ್ದಾರೆ. ಅಲ್ಲದೇ, ಮದುವೆಯಾಗುವುದಾಗಿ ಒಪ್ಪಿಕೊಂಡು ಬಳಿಕ ಮದುವೆ ಆಗುವುದಕ್ಕೆ ಸಾಧ್ಯವಾಗಿಲ್ಲ. ಐಪಿಸಿ ಸೆಕ್ಷನ್ 415ರ ಪ್ರಕಾರ ಮೋಸ ಎಂದು ಪರಿಗಣಿಸಲಾಗದು. ಹೀಗಾಗಿ ಮೇಲ್ಮನವಿದಾರನನ್ನು ವಂಚನೆ ಆರೋಪದಲ್ಲಿ ಶಿಕ್ಷೆಗೆ ಗುರಿಪಡಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ.