ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿ ಮಂಡ್ಯದಲ್ಲಿ ಬಿಜೆಪಿಯಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು. ಬೈಕ್ ಗೆ ನೇಣು ಕುಣಿಕೆ ಹಾಕಿ ಆತ್ಮಹತ್ಯೆ ಮಾಡಿಕೊಳ್ಳುವಾಗೆ ಅಣಕು ಪ್ರದರ್ಶನ ಮಾಡಿದ್ದು, ಜಿಲ್ಲಾ ಬಿಜೆಪಿ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯಾಗಿದೆ.
ಕಿವಿಯಲ್ಲಿ ಹೂ ಇಟ್ಟುಕೊಂಡು ಟಕಾ ಟಕಾ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಮಂಡ್ಯದ ಸಂಜಯ್ ವೃತ್ತದಲ್ಲಿ ಬೆಂ-ಮೈ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದು, ಸಿದ್ದರಾಮಯ್ಯ ಸರ್ಕಾರ ಹಿಟ್ಲರ್ ರೀತಿ ವರ್ತನೆ ಮಾಡ್ತಿದೆ. ಗ್ಯಾರಂಟಿಗಾಗಿ ತೆರೆಗೆ ಹೆಚ್ಚಳ ಮಾಡಿ ಜನರಿಗೆ ಭರೆ ಎಳೆದಿದ್ದಾರೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ಹೊರೆ ಹಾಕಿದ್ದಾರೆ. ತಕ್ಷಣವೇ ಬೆಲೆ ಕಡಿಮೆ ಮಾಡುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಸಿದ್ದರಾಮಯ್ಯ, ಸಿಟಿ ಮಂಜುನಾಥ, ಸಿದ್ದರಾಜು, ಸೇರಿದಂತೆ ಕಾರ್ಯಕರ್ತರು ಭಾಗಿಯಾಗಿದ್ದರು.