ಭಾರತದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಮದುವೆಗೆ ಇನ್ನೇನು ಕೆಲವು ದಿನಗಳು ಮಾತ್ರವೇ ಬಾಕಿ ಉಳಿದಿವೆ. ಪ್ರೀ ವೆಡ್ಡಿಂಗ್ ಕಾರ್ಯಕ್ರಮಗಳು ಸಾಕಷ್ಟು ಅದ್ದೂರಿಯಾಗಿ ನಡೆಸಿದ್ದ ಅಂಬಾನಿ ಕುಟುಂಬ ಇದೀಗ ಮದುವೆಗೆ ಸ್ವರ್ಗವನ್ನೇ ಧರೆಗಿಳಿಸಲು ಮುಂದಾಗಿದೆ. ಈ ಹಿಂದೆ ಪ್ರೀವೆಂಡಿಂಗ್ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದ್ದ ಸೆಲೆಬ್ರೆಟಿಗಳು ಪರ್ಫಾಮೆನ್ಸ್ ಮಾಡಿದ್ದರು. ಈಗ ಮದುವೆಗೂ ಹಾಗೇ ಸಿದ್ಧತೆಗಳು ಜೋರಾಗಿಯೇ ನಡೆಯುತ್ತಿವೆ.
ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ ಸಮಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಮೂರು ದಿನಗಳು ನಡೆಯುತ್ತಿರುವ ಈ ಸಮಾರಂಭದಲ್ಲಿ ಅಂತರಾಷ್ಟ್ರೀಯ ಪಾಪ್ ತಾರೆ ಜಸ್ಟಿನ್ ಬೀಬರ್ ಹಾಡಲಿದ್ದಾರೆ. ಅದಕ್ಕಾಗಿ ಈಗಾಗಲೇ ಜಸ್ಟಿನ್ ಬೀಬರ್ ಮುಂಬೈಗೂ ಬಂದು ಇಳಿದಿದ್ದಾರೆ.
ಜುಲೈ 12ರಂದು ಮದುವೆ ನಡೆಯುತ್ತಿದ್ದು, ಅದರಕ್ಕೂ ಮುನ್ನ ಸಂಗೀತ ಕಾರ್ಯಕ್ರಮ ನಡೆಯಲಿದೆ. ಅಂದ್ಹಾಗೆ ಇಂದು ಸಂಜೆ (ಜುಲೈ 5) ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಜಸ್ಟಿನ್ ಬೀಬರ್ ಹಾಡುತ್ತಿದ್ದು ಕಾರ್ಯಕ್ರಮ ವೀಕ್ಷಿಸಲು ಬಾಲಿವುಡ್ ತಾರೆಯರ ದಂಡೇ ಹಾಜರಾಗಲಿದೆ.
ಜಸ್ಟಿನ್ ಬೀಬರ್ ಬರೋಬ್ಬರಿ ಏಳು ವರ್ಷಗಳ ಬಳಿಕ ಭಾರತಕ್ಕೆ ಬಂದಿದ್ದಾರೆ. ಅನಂತ್ ಅಂಬಾನಿ ಮದುವೆಗೂ ಮುನ್ನವೇ ಭಾರತದಲ್ಲಿ ಕಾರ್ಯಕ್ರಮ ನೀಡಬೇಕಿತ್ತು. 2022ರಲ್ಲಿ ಜಸ್ಟಿನ್ ಬೀಬರ್ ಮ್ಯೂಸಿಕ್ ಕಾನ್ಸರ್ಟ್ಗೆ ಆಯೋಜನೆ ಮಾಡಲಾಗಿತ್ತು. ಆದರೆ, ಆರೋಗ್ಯ ಸಮಸ್ಯೆಯಿಂದ ಇದು ಸಾಧ್ಯವಾಗಿರಲಿಲ್ಲ. ಈಗ ಅನಂತ್ ಅಂಬಾನಿ ಮದುವೆಯ ಕಾರಣದಿಂದ ಜಸ್ಟಿನ್ ಬೀಬರ್ ಭಾರತಕ್ಕೆ ಬರುತ್ತಿದ್ದಾರೆ.
ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಸಂಗೀತ್ ಕಾರ್ಯಕ್ರಮದಲ್ಲಿ ಜಸ್ಟಿನ್ ಬೀಬರ್ಗೆ ಸುಮಾರು 83 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆಯಂತೆ. ಜಸ್ಟಿನ್ ಬೀಬರ್ ಕೊಟ್ಟಿರೋ ಹಣದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಹಾಗೇ ಜಸ್ಟಿನ್ ಬೀಬರ್ ಜೊತೆಗೆ ಅಡೆಲೆ, ಡ್ರೇಕ್ ಮತ್ತು ಲಾನಾ ಡೆಲ್ ರೇ ಕೂಡ ಪರ್ಫಾಮೆನ್ಸ್ ಮಾಡುತ್ತಾರೆಂದು ಹೇಳಲಾಗುತ್ತಿದೆ.
ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ ಜುಲೈ 12 ರಿಂದ ಆರಂಭ ಆಗುತ್ತಿದೆ. ಮೊದಲ ದಿನ ಮದುವೆ ನಡೆಯಲಿದೆ. ಜುಲೈ 13ಕ್ಕೆ ನವ ಜೋಡಿಗೆ ಆಶೀರ್ವಾದ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಗೇ ಜುಲೈ 13ರಂದು ಆರತಕ್ಷತೆ ಕಾರ್ಯಕ್ರಮ ಜರುಗಲಿದೆ. ಬಾಲಿವುಡ್ ತಾರೆಯರು, ಉದ್ಯಮಿಗಳು ಹಾಗೂ ರಾಜಕೀಯ ಮುಖಂಡರು ಸೇರಿದಂತೆ ಸಾಕಷ್ಟು ಗಣ್ಯರು ಮದುವೆಯಲ್ಲಿ ಭಾಗಿಯಾಗಲಿದ್ದಾರೆ.