ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು (Chandrababu Naidu) ಅವರನ್ನು ಶನಿವಾರ ಮುಂಜಾನೆ ನಂದ್ಯಾಲ್ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಇದೊಂದು ದ್ವೇಷಪೂರಿತ ನಡೆಯಾಗಿದ್ದು, ಈ ಬಂಧನವನ್ನು ಖಂಡಿಸುವುದಾಗಿ ನಟ ಹಾಗೂ ಜನಸೇವಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ (Pawan Kalyan) ಖಂಡಿಸಿದ್ದಾರೆ.
ಸಿಐಡಿ ಅಧಿಕಾರಿಗಳ ಈ ಬಂಧನವನ್ನು (Arrest)ಖಂಡಿಸಿರುವ ನಟ ಪವನ್ ಕಲ್ಯಾಣ್, ‘ಚಂದ್ರಬಾಬು ನಾಯ್ಡು ಅವರ ಬಂಧನವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಘಟನೆಗಳು ದುರದೃಷ್ಟಕರ. ಇಂದು ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿದ ರೀತಿ ನೋಡಿ ದುಃಖವಾಗಿದೆ. ಅಧಿಕಾರಿಗಳು ರಾಜಕೀಯ ಪಕ್ಷ ಮತ್ತು ಸರ್ಕಾರದ ನಾಯಕರ ಆದೇಶದಂತೆ ಬಂಧಿಸುವ ರೀತಿಯನ್ನು ನಾವು ಬಹಿರಂಗವಾಗಿ ವಿರೋಧಿಸುತ್ತೇವೆ’ ಎಂದಿದ್ದಾರೆ.