ಬೆಂಗಳೂರು: ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಹೊಸ ಸಮರ ಸಾರಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬೆಂಗಳೂರು ಚಲೋ ನಡೆಸಲು ಮುಂದಾಗಿದ್ದಾರೆ.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ & ಸಹಾಯಕಿಯರ ಸ್ವತಂತ್ರ ಸಂಘಟನೆಯಿಂದ ಇಂದು ಬೆಳಗ್ಗೆ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಸಲು ಚಲೋಗೆ ಕರೆ ನೀಡಲಾಗಿದೆ.
ಕರ್ನಾಟಕ ರಾಜ್ಯದಲ್ಲಿ ಬರೋಬ್ಬರಿ 1,32,000 ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರು ಇದ್ದಾರೆ. ಸರ್ಕಾರದಿಂದ 1,32,000 ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರಿಗೆ ಗೌರವ ಧನ ಹೆಸರಲ್ಲಿ ಶೋಷಣೆ ಮಾಡುತ್ತಿದೆ. ಇವರಿಗೆ ಯಾವುದೇ ರೀತಿಯ ಸಾಮಾಜಿಕ ಭದ್ರತೆ ಕಲ್ಪಿಸಿಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕರಿಗೆ ಕನಿಷ್ಠ ವೇತನ ಜಾರಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಬೇಡಿಕೆಗಳು ಏನೇನು…?
- ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕಿಯರಿಗೆ ಕನಿಷ್ಠ 21,000 ವೇತನ ನೀಡಬೇಕು
- ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ ಮಾಡಬೇಕು
- ಎಲ್ಲಾ ಮಿನಿ ಅಂಗನವಾಡಿ ಕೇಂದ್ರಗಳನ್ನ ಮೇಲ್ವರ್ಜೆಗೆ ಏರಿಸಬೇಕು
- ಸುಪ್ರೀಂ ಕೋರ್ಟ್ ಆದೇಶದಂತೆ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕರಿಗೆ ಗ್ರಾಜ್ಯುಟಿ ಹಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವ ಧನವನ್ನು ₹15 ಸಾವಿರ, ₹10 ಸಾವಿರ ಹೆಚ್ಚಿಸಲಾಗುವುದೆಂದು ಚುನಾವಣಾ ಪೂರ್ವದಲ್ಲಿ ಬೆಳಗಾವಿಯ ಖಾನಪುರದಲ್ಲಿ ಕೈ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭರವಸೆ ಕೊಟ್ಟಿದ್ದರು. ಕಾಂಗ್ರೆಸ್ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ ಮಾಡಲು ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಒತ್ತಾಯಿಸಿದ್ದಾರೆ.
- ಪ್ರತಿಭಟನೆಗೆ ಭಾಗಿಯಾಗಲಿರೋ ಸಂಘಟನೆಗಳು1) ಕರ್ನಾಟಕ ರಾಜ್ಯ ರೈತ ಸಂಘ
2)INTUC
3)ಕರ್ನಾಟಕ ಪ್ರಾಂತ ರೈತ ಸಂಘ
4)AITUC
5)ಕರ್ನಾಟಕ ರಾಜ್ಯ ರೈತ ಸಂಘ (ಹಸಿರುಸೇನೆ)
6)CITU
7)ಅಖಿಲ ಭಾರತ ಕಿಸಾನ್ ಸಭಾ
8) ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ
9)AIUTUC
10)AIKKMS
11) TUCC
12)ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ
13)AICCTU
14)ಮಹಿಳಾ ಸಂಘಟನೆಗಳು
15)HMKP
16)ಕರ್ನಾಟಕ ಜನಶಕ್ತಿ
17)KWC
18)ಕರ್ನಾಟಕ ರೈತ ಸಂಘ
19)NCL
20) ಭಾರತೀಯ ಕೃಷಿಕ್ ಸಮಾಜ
21)KIEEF
22)ಕರ್ನಾಟಕ ಶ್ರಮಿಕ ಶಕ್ತಿ
23)ಜನಾಂದೋಲನ ಮಹಾಮೈತ್ರಿ
24)ಭೂಮಿ ಮತ್ತು ವಸತಿ ಹಕ್ಕು
25)ವಂಚಿತರ ಹೋರಾಟ ಸಮಿತಿ
26)ಕರ್ನಾಟಕ ವಿದ್ಯುತ್ ಶಕ್ತಿ ನೌಕರರ ಸಂಘ
27)ಕರ್ನಾಟಕ ಜನಾಂದೋಲನ ಸಮಿತಿ