ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಾವಿರಾರು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ರಚನೆಗೂ ಮುನ್ನ ನೀಡಿದ 6 ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಎರಡು ದಿನಗಳ ಕಾಲ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ಯೆಯರ ಸಂಘದಿಂದ ಪ್ರತಿಭಟನೆ ನಡೆಸುತ್ತಿದ್ದು ಇವತ್ತಿನಿಂದ ಎರಡು ದಿನಗಳ ಕಾಲ ಅಹೋರಾತ್ರಿ ಧರಣಿಗೆ ಸಿದ್ಧತೆ ನಗರದ ಫ್ರೀಡ್ಂ ಪಾರ್ಕ್ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿರೋ ಆಶಾ ಕಾರ್ಯಕರ್ತರು ಆಶಾ ಪ್ರೋತ್ಸಾಹ ಧನ ಪಾವತಿ, RCH ಪೊರ್ಟಲ್ನಿಂದ ಡೀಲಿಂಕ್
ಮಾಸಿಕ ಕನಿಷ್ಟ ವೇತನ 15 ಸಾವಿರ ನಿಗಧಿ ಮಾಡುವಂತೆ ಹಾಗೂ ಇನ್ನೀತರ ಬೇಡಿಕೆಗಳಿಗೆ ಒತ್ತಾಯಿಸಿ ನಡೆಯುತ್ತಿರುವ ಧರಣಿ
ಇಲ್ಲಿದೆ ಬೇಡಿಕೆಗಳು
- ಪ್ರೋತ್ಸಾಹಧನಕ್ಕೆ ಸಂಬಂಧಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ಆಗುತ್ತಿರುವ ವಂಚನೆ ತಡೆಯಲು ಆರ್.ಸಿ.ಎಚ್. ಪೋರ್ಟಲ್ ಅನ್ನು ವೇತನ ಪಾವತಿ ಪ್ರಕ್ರಿಯೆಯಿಂದ ಬೇರ್ಪಡಿಸಬೇಕು.
- ಮೊಬೈಲ್ ಬಳಕೆ ಬಾರದವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು.
- ಮೊಬೈಲ್ ಬಳಸಿ ದತ್ತಾಂಶ ಸಂಗ್ರಹಿಸುವವರಿಗೆ ಪ್ರೋತ್ಸಾಹಧನ ಒದಗಿಸಬೇಕು.
- ಆರ್.ಸಿ.ಎಚ್. ಪೋರ್ಟಲ್ನಲ್ಲಿನ ವಿವಿಧ ಸಮಸ್ಯೆಗಳಿಂದಾಗಿ ಹಲವು ವರ್ಷಗಳಿಂದ ಬಾಕಿಯಿರುವ ಪ್ರೋತ್ಸಾಹಧನವನ್ನು ನೀಡಲು ಕೂಡಲೇ ಕ್ರಮಕೈಗೊಳ್ಳಬೇಕು
- 2019-21ರವರೆಗಿನ ಕೋವಿಡ್ ವಿಶೇಷ ಪ್ರೋತ್ಸಾಹಧನವನ್ನು ಪಾವತಿಸಬೇಕು.
- ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಪಿಎಫ್, ಇಎಸ್ಐ ಸೇರಿ ವಿವಿಧ ಸೌಲಭ್ಯಗಳನ್ನು ಒದಗಿಸಬೇಕು.
- 60 ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ₹ 3 ಲಕ್ಷ ಒದಗಿಸಬೇಕು.
- ತೀವ್ರ ಅನಾರೋಗ್ಯಕ್ಕೆ ಒಳಗಾದ ಆಶಾ ಕಾರ್ಯಕರ್ತೆಯರಿಗೆ ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳು ನಿಶ್ಚಿತ ಗೌರವಧನ ನೀಡಬೇಕು.
- ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಆರೋಗ್ಯ ವಿಮಾ ಯೋಜನೆಯಡಿ ₹ 5 ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ಒದಗಿಸಬೇಕು.