ಸಂಸದ ಡಿಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಅವರ ವಿರುದ್ಧ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆಯಲ್ಲಿ (Davanagere) ನಡೆದ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿದ್ದ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ ನಾಯಕರನ್ನ (Congress Leaders) ಟೀಕಿಸುವ ಭರದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಈಶ್ವರಪ್ಪ ಅವರ ಹೇಳಿಕೆ ಖಂಡಿಸಿ ಕಾಂಗ್ರೆಸ್ ಮುಖಂಡ ಹನುಮಂತ ಅವರು `ಪ್ರಾಣ ಬೆದರಿಕೆ ಹಾಗೂ ಪ್ರಚೋದನಕಾರಿ’ ಹೇಳಿಕೆ ಅಡಿಯಲ್ಲಿ ದೂರು ದಾಖಲಿಸಿದ್ದರು. ಕೈ ಮುಖಂಡನ ದೂರು ಆಧರಿಸಿ ಪೊಲೀಸರು ಐಪಿಸಿ ಸೆಕ್ಷನ್ 505 (1) (C), 505 (2), ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.