ನವದೆಹಲಿ: ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಮಾರ್ಕೆಟ್ನಲ್ಲಿ ಇರುವುದಕ್ಕೆ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ನವೆಂಬರ್ 15ರಂದು ಮತ್ತಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರುತ್ತಾರೆ ಎಂದು ನವದೆಹಲಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಬಿಜೆಪಿಯವರು ನಮ್ಮ ಶಾಸಕರನ್ನೂ ಕರೆದುಕೊಳ್ಳಲು ಆಗಲ್ಲ. ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆಯೇ ತೀರ್ಮಾನ ಮಾಡಲು ಆಗಿಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯಲ್ಲೇ ಸಾಕಷ್ಟು ಸಮಸ್ಯೆ ಇದೆ ಎಂದ ಕಿಡಿಕಾರಿದರು.
ಮೇಕೆದಾಟು ವಿಚಾರವನ್ನು CWMA ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ‘ಸುಪ್ರೀಂ’ ಆದೇಶದಂತೆ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು ಎಂದು ತಿಳಿಸಿದರು. ನೀರು ಮೀಸಲಿಡುವ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ‘ಸುಪ್ರೀಂ’ ಅನುಮತಿ ಪಡೆದು ಪ್ರತಿವರ್ಷ 24 ಟಿಎಂಸಿ ನೀರು ಮೀಸಲಿಟ್ಟು ಆದೇಶ ಹೊರಡಿಸಿದ್ದೇವೆ. ಮುಂದಿನ ವಾರ ಮೇಕೆದಾಟು ಯೋಜನೆ ವಿಚಾರ ಚರ್ಚೆಗೆ ಬರಲಿದೆ ಎಂದರು.