ಪಾಕಿಸ್ತಾನದಲ್ಲಿ ಮತ್ತೋರ್ವ ಭಯೋತ್ಪಾದಕ ಉಗ್ರ ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಭಯೋತ್ಪಾದಕರಿಗೆ ಸುರಕ್ಷಿತ ತಾಣವಾಗಿರುವ ಪಾಕಿಸ್ತಾನ ಇತ್ತೀಚಿನ ದಿನಗಳಲ್ಲಿ ಉದ್ವಿಗ್ನ ಸ್ಥಿತಿಯಲ್ಲಿದ್ದು, ಭಯೋತ್ಪಾದಕರು ಒಬ್ಬೊಬ್ಬರಾಗಿ ನಿಗೂಢವಾಗಿ ಸಾಯುತ್ತಿದ್ದಾರೆ ಎಂಬ ಆತಂಕಕಾರಿ ವಿಷಯ ವರದಿಯಾಗಿದೆ.
ಪಾಕ್ ನ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶೇಖ್ ಜಮೀಲ್ ಉರ್ ರೆಹಮಾನ್ ನಿಗೂಢವಾಗಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಈತನ ಸಾವಿಗೆ ಕಾರಣ ತಿಳಿದಿಲ್ಲ.
ವರದಿಯ ಪ್ರಕಾರ, ಭಯೋತ್ಪಾದಕ ಶೇಖ್ ಜಮೀಲ್ ಉರ್ ರೆಹಮಾನ್ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಶೇಖ್ ಜಮೀಲ್ ಉರ್ ರೆಹಮಾನ್ ಯುನೈಟೆಡ್ ಜಿಹಾದ್ ಕೌನ್ಸಿಲ್ನ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಇದಲ್ಲದೆ, ಶೇಖ್ ಜಮೀಲ್ ಉರ್ ರೆಹಮಾನ್ ತೆಹ್ರೀಕ್-ಉಲ್-ಮಜಾಹಿದೀನ್ನ ಅಮೀರ್ ಆಗಿದ್ದರು. ಅಕ್ಟೋಬರ್ 2022 ರಲ್ಲಿ, ಭಾರತವು ಶೇಖ್ ಜಮೀಲ್ ಉರ್ ರೆಹಮಾನ್ ಅವರನ್ನು ಭಯೋತ್ಪಾದಕ ಎಂದು ಘೋಷಿಸಿತು.
ಕಾಶ್ಮೀರದಲ್ಲಿ ನಡೆದ ಹಲವು ದಾಳಿಗಳಿಗೆ ಭಯೋತ್ಪಾದಕ ಶೇಖ್ ಜಮೀಲ್ ಉರ್ ರೆಹಮಾನ್ ಕಾರಣ ಎಂದು ಹೇಳಲಾಗಿದೆ. ಹಲವು ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ. ಭಯೋತ್ಪಾದಕ ಶೇಖ್ ಜಮೀಲ್ ಉರ್ ರೆಹಮಾನ್ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಜೊತೆ ನಿಕಟವಾಗಿ ಕೆಲಸ ಮಾಡುತ್ತಿದ್ದ ಎಂಬ ಆರೋಪವಿದೆ.