ಮಹದೇವಪುರ: ಏ.3-ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಕಳೆದ ಹದಿನೈದು ವರ್ಷಗಳಲ್ಲಿ ಕೈಕೊಂಡ ಜನೋಪಯೋಗಿ ಕಾರ್ಯಗಳನ್ನ ಮೆಚ್ಚಿ ಅನ್ಯ ಪಕ್ಷದ ಮುಖಂಡರು ಕಾರ್ಯಕರ್ತರು ಬಿಜೆಪಿಗೆ ಸೇರುತ್ತಿರುವುದು ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಲು ಉತ್ತೇಜನ ನೀಡುತ್ತಿದೆ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.
ಮಹದೇವಪುರ ಕ್ಷೇತ್ರದ ಬಿದರಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದ 100 ಕ್ಕೂ ಹೆಚ್ಚು ಬೆಂಬಲಿಗರು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡು ಮಾತನಾಡಿದರು ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು ಮತ್ತೊಮ್ಮೆ ಡಬ್ಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಅಧಿಕಾರಕ್ಕೆ ಬರುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದರು.
ಬಿಜೆಪಿ ಪಕ್ಷದಲ್ಲಿ ಪ್ರತಿಯೊಬ್ಬ ಕಾರ್ಯಕರ್ತರಿಗೂ ಸಿಗಬೇಕಾದ ಎಲ್ಲಾ ಗೌರವ ಸಿಗುತ್ತದೆ ಪಕ್ಷಕ್ಕೆ ಸೇರ್ಪಡೆಯಾದ ತಕ್ಷಣ ನಾವೆಲ್ಲರೂ ಬಿಜೆಪಿಗರು, ಹೊಸಬರು ಹಳಬರು ಎಂದು ಭೇದಭಾವ ಇಲ್ಲದೇ ಪಕ್ಷ ಸಂಘಟನೆ ಮತ್ತು ಪಕ್ಷ ನೀಡುವ ಜವಾಬ್ದಾರಿಯನ್ನ ಸರಿಯಾಗಿ ನಿಭಾಯಿಸಬೇಕು ಎಂದರು.
ನಮ್ಮ ಅಭಿವೃದ್ಧಿ ಮೆಚ್ಚಿ ಬಿದರಹಳ್ಳಿ ಪಂಚಾಯತಿ ಅಧ್ಯಕ್ಷ ಬಿ.ಜಿ.ರಾಜೇಶ್, ಕಣ್ಣೂರು ಪಂಚಾಯಿತಿ ಮಾಜಿ ಅಧ್ಯಕ್ಷ ಅಶೋಕ್ ಹಾಗೂ ನಂಜುಂಡ ಅವರ ನೇತೃತ್ವದಲ್ಲಿ ಬೈರತಿ ಬಂಡೆಯ ಕಾಂಗ್ರೆಸ್ ಮುಖಂಡರಾದ ಶ್ರೀನಿವಾಸ್, ನಾಗರಾಜ್, ಕುಮಾರ್, ಪಳನಿ, ಸುರೇಶ್ ಪಟೇಲ್ , ವಿಘ್ನೇಶ್ ಸೇರಿಂದತೆ ನೂರಾರು ಕಾರ್ಯಕರ್ತರು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.ಮತ್ತೆ ಯಾವತ್ತು ಬೇರೆ ಪಕ್ಷದತ್ತಾ ಮುಖ ಮಾಡಬೇಡಿ ನಿಮ್ಮ ಮತ್ತು ಗ್ರಾಮದಲ್ಲಿ ಯಾವುದೇ ಸಮಸ್ಯೆಗಳು ಇದ್ದಲ್ಲಿ ನಮ್ಮ ಮುಖಂಡರ ಗಮನಕ್ಕೆ ತರುವಂತೆ ಸೂಚಿಸಿದರು.
ಕಣ್ಣೂರು ಮತ್ತು ಬಿದರಹಳ್ಳಿ ವ್ಯಾಪ್ತಿಗೆ ಸೂಮಾರು 60 ಕೋಟಿಗೂ ಹೆಚ್ಚು ಅನುದಾನವನ್ನ ನೀಡಿ ಅಭಿವೃದ್ದಿ ಕಾರ್ಯಗಳನ್ನ ಮಾಡಲಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಕೆರೆಗಳ ಸಂರಕ್ಷಣೆ ಹಾಗೂ ಪುರಾತನ ಕಲ್ಯಾಣಿಗಳ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿದ್ದು ಕೆರೆ ತುಂಬಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.
ಹಳ್ಳಿಗಳಿಂದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನ ಅಭಿವೃದ್ಧಿ ಮಾಡಲಾಗಿದೆ ಎಂದು ತಿಳಿಸಿದರು.
ಇನ್ನೂ 40 ದಿನ ಕಾರ್ಯಕರ್ತರು ಕೆಲಸ ಮಾಡಿದರೆ ಐದು ವರ್ಷ ನಿಮ್ಮ ಸೇವೆ ಮಾಡುತ್ತೇನೆ ಎಂದು ಹೇಳಿದರು.ಇಲ್ಲಿ ಪಕ್ಷ ಸೇರ್ಪಡೆ ಆದವರು ಮತ ಹಾಕಿ ನಿಮ್ಮ ಸುತ್ತಮುತ್ತಲಿನ ಜನರನ್ನ ಮನಹೊಲಿಸಿ
ಮತವನ್ನ ಹಾಕಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಅಧ್ಯಕ್ಷ ನಟರಾಜ್, ಗ್ರಾಪಂ ಅಧ್ಯಕ್ಷ ರಾಜೇಶ್ , ಮಾಜಿ ಜಿಪಂ ಸದಸ್ಯ ಗಣೇಶ್, ಭೂ ನ್ಯಾಯ ಮಂಡಳಿ ಸದಸ್ಯ ಮಧುಕುಮಾರ್ , ಮುಖಂಡರಾದ , ಕಣ್ಣೂರು ಅಶೋಕ್, ಜ್ಯೋತಿಪುರ ವೇಣು ಮತ್ತಿತರರಿದ್ದರು.