ಹಮಾಸ್ ನಾಯಕರ ಹತ್ಯೆ ಬಳಿಕ ಇರಾಕ್ ಹಾಗೂ ಇಸ್ರೇಲ್ ನಡುವೆ ಸಂಘರ್ಷ ಜೋರಾಗಿದೆ. ಇದೀಗ ಇಸ್ರೇಲ್ ಮೇಲೆ ಇರಾನ್ ಮತ್ತೆ ಭೀಕರ ದಾಳಿ ನಡೆಸಿದೆ. ಇಸ್ರೇಲ್ ಮೇಲೆ 400 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಇರಾನ್ ಉಡಾಯಿಸಿದೆ.
ಇರಾನ್ನ ಪ್ರಮುಖ ನಗರಗಳಿಂದ ಇಸ್ರೇಲ್ ಗುರಿಯಾಗಿಸಿ, ಕ್ಷಿಪಣಿ ದಾಳಿ ನಡೆಸಲಾಗಿದೆ. ಇರಾನ್ನ ಪ್ರಮುಖ ನಗರಗಳಾದ ಇಸ್ಫಹಾನ್, ತಬ್ರಿಜ್, ಖೋರಮಾಬಾದ್, ಕರಾಜ್ ಮತ್ತು ಅರಾಕ್ಸೇರಿದಂತೆ ಹಲವೆಡೆಯಿಂದ ಇಸ್ರೇಲ್ ಮೇಲೆ ಸುಮಾರು 400 ಕ್ಷಿಪಣಿಗಳನ್ನು ಉಡಾಯಿಸಲಾಗಿದೆ. ಹಮಾಸ್ ನಾಯಕ ಹತ್ಯೆಗೆ ಪ್ರತಿಕಾರವಾಗಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸುವ ನಿರ್ಧಾರವನ್ನು ಇರಾನ್ನ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿ ಮಾಡಿದೆ ಅಂತ ವಿದೇಶಿ ಮಾಧ್ಯಮಗಳು ವರದಿ ಮಾಡಿವೆ.
ಜುಲೈ 31ರಂದು ಟೆಹ್ರಾನ್ನಲ್ಲಿ ಫೆಲೆಸ್ತೀನ್ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ನನ್ನು ಇಸ್ರೇಲ್ ಹತ್ಯೆ ಮಾಡಲಾಗಿತ್ತು. ಸೆಪ್ಟೆಂಬರ್ 27 ರಂದು ಬೈರುತ್, ಲೆಬನಾನ್ನಲ್ಲಿ ತನ್ನ ಬೃಹತ್ ವೈಮಾನಿಕ ದಾಳಿಯಲ್ಲಿ, ಇಸ್ರೇಲ್ ಇರಾನಿನ ಬ್ರಿಗೇಡಿಯರ್ ಜನರಲ್ ಅಬ್ಬಾಸ್ ನಿಲ್ಫೊರೌಶನ್ ಎಂಬಾತನನ್ನೂ ಹತ್ಯೆ ಮಾಡಿತ್ತು. ಇದಕ್ಕೆ ಪ್ರತಿಕಾರವಾಗಿ ಇಸ್ರೇಲ್ ಮೇಲೆ ಇರಾನ್ ದಾಳಿ ನಡೆಸಿದೆ ಎನ್ನಲಾಗಿದೆ.
ಇರಾನ್ ದಾಳಿಗೆ ಪ್ರತಿಕಾರವಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕ್ಷಿಪಣಿಗಳನ್ನು ಹಾರಿಸಿದೆ. ಇರಾನ್ನಿಂದ ರಾಕೆಟ್ಗಳನ್ನು ಇಸ್ರೇಲ್ಗೆ ಹಾರಿಸುವುದರಿಂದ ಎಲ್ಲಾ ಇಸ್ರೇಲಿ ನಾಗರಿಕರು ಬಾಂಬ್ ಬಂಕರ್ಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ವರದಿಯಾಗಿದೆ.