ಇದೇ ನವೆಂಬರ್ 12 ರಂದು ಬೆಂಗಳೂರಿನ (Bangalore) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಕ್ರಿಕೆಟ್ (Cricket) ಪಂದ್ಯಾವಳಿಯನ್ನು ವೀಕ್ಷಿಸುವುದಕ್ಕಾಗಿ ಬಾಲಿವುಡ್ ನಟಿ, ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಪತ್ನಿ ಅನುಷ್ಕಾ ಶರ್ಮಾ ಬೆಂಗಳೂರಿಗೆ ಆಗಮಿಸಿದ್ದಾರೆ. ಸದ್ಯ ಅವರು ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ಒಂದರಲ್ಲಿ ಉಳಿದುಕೊಂಡಿದ್ದಾರೆ.
ನೆದರ್ ಲ್ಯಾಂಡ್ಸ್ ವಿರುದ್ಧ ಭಾರತವು ಅಂದು ಆಡಲಿದ್ದು, ಜೊತೆಗೆ ವಿರಾಟ್ ಕೊಹ್ಲಿ 50ನೇ ಶತಕವನ್ನು ಬಾರಿಸಬಹುದು ಎನ್ನುವ ನಿರೀಕ್ಷೆ ಕೂಡ ಇದೆ. ಹೀಗಾಗಿ ಕಡ್ಡಾಯವಾಗಿ ಅನುಷ್ಕಾ (Anushka Sharma) ಈ ಪಂದ್ಯವನ್ನು ವೀಕ್ಷಿಸುವುದಕ್ಕಾಗಿ ಬಂದಿದ್ದಾರೆ. ಮೊನ್ನೆಯಷ್ಟೇ ವಿರಾಟ್ ಕೊಹ್ಲಿ 49ನೇ ಸೆಂಚ್ಯುರಿ ಬಾರಿಸಿ, ಸಚಿನ್ ದಾಖಲೆಯನ್ನು ಮುರಿದಿದ್ದಾರೆ.
ಈಗಾಗಲೇ ಭಾರತವು ಎಂಟು ಪಂದ್ಯಗಳನ್ನು ಆಡಿದ್ದು, ಇದು ಕೊನೆಯ ಪಂದ್ಯವಾಗಿದೆ. ಈಗಾಗಲೇ ಭಾರತವು ಒಟ್ಟು ಎಂಟು ಪಂದ್ಯಗಳನ್ನು ಗೆದ್ದಿದೆ. ಒಂಬತ್ತನೆ ಪಂದ್ಯವನ್ನೂ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ಕ್ರಿಕೆಟ್ ಪ್ರೇಮಿಗಳದ್ದು. ಈಗಾಗಲೇ ಅಂದಿನ ಎಲ್ಲ ಟಿಕೆಟ್ ಸೋಲ್ಡ್ ಔಟ್ ಆಗಿವೆ.