ಬೆಂಗಳೂರು: ನ್ಯಾಯಾಲಯದ ಆದೇಶ ಹಾಗೂ ನಿರ್ದೇಶನಗಳನ್ನು ಪಾಲಿಸಲು ಸರಕಾರದ ಎಲ್ಲಾಇಲಾಖೆಗಳು ಮತ್ತು ಅದರ ಪ್ರಾಧಿಕಾರಗಳಲ್ಲಿ ಆಂತರಿಕ ಮೇಲ್ವಿಚಾರಣಾ ವ್ಯವಸ್ಥೆ ಆರಂಭಿಸುವ ವಿಚಾರ ಸಂಬಂಧ ಕರ್ನಾಟಕ ಹೈಕೋರ್ಟ್, ರಾಜ್ಯ ಸರಕಾರದ ಮುಖ್ಯ ಕಾಯದರ್ಶಿ ಮತ್ತು ಸರಕಾರದ 41 ಇಲಾಖೆಗಳಿಗೆ ನೋಟಿಸ್ ಜಾರಿಗೊಳಿಸಿದೆ.
ನ್ಯಾಯಾಲಯಗಳ ಆದೇಶ ಪಾಲಿಸಲು ಸರಕಾರ ಮತ್ತದರ ಪ್ರಾಧಿಕಾರಗಳ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಹಿನ್ನೆಲೆಯಲ್ಲಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಮಂಗಳವಾರ ಈ ಆದೇಶ ಮಾಡಿದೆ.
ಅರ್ಜಿಯಲ್ಲಿ ಕೃಷಿ, ಕಂದಾಯ, ಆರೋಗ್ಯ ಹಾಗೂ ಗೃಹ ಇಲಾಖೆ ಸೇರಿದಂತೆ 41 ಇಲಾಖೆಗಳನ್ನು, ಬಿಡಿಎ, ಬಿಬಿಎಂಪಿ ಆಯುಕ್ತರು ಮತ್ತು ಕೆಐಎಡಿಬಿ ಕಾರ್ಯಕಾರಿ ನಿರ್ದೇಶಕರನ್ನು ಅನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿದಾರರ ಪರ ವಕೀಲ ಮಧುಕರ್ ಎಂ. ದೇಶಪಾಂಡೆ ಅವರ ವಾದ ಆಲಿಸಿದ ವಿಭಾಗೀಯ ಪೀಠ, ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿತು.