ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ಸುತ್ತಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ-ಬಾಲಕಿಯರ ವಸತಿ ನಿಲಯಗಳಿಗೆ ಪ.ಜಾತಿ ಪ.ಪಂಗಡ ಹಿಂದುಳಿದ ವರ್ಗಗಳ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ವಸತಿ ನಿಲಯ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಿರುವುದನ್ನು ಮುಂಡರಗಿಯ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ವಸತಿ ನಿಲಯದ ಪ್ರವೇಶಕ್ಕಾಗಿ 5 ರಿಂದ 10ನೇ ತರಗತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರು 2024-25ರ ಸಾಲಿನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಕಾರ್ಯಾಲಯದಲ್ಲಿ ಪ್ರವೇಶ ಅರ್ಜಿ ಲಭ್ಯವಿವೆ ಸದರಿ ಅರ್ಜಿ ಪಡೆದು ಭರ್ತಿ ಮಾಡಿ ದಾಖಲೆಗಳನ್ನು ಲಗತ್ತಿಸಿ ಸಂಬಂಧಿಸಿದ ಶಾಲೆಯ ಮುಖ್ಯಸ್ಥರಿಂದ ದೃಢೀಕರಿಸಿ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಜೂನ್ 30 ಆಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08371-295949 ಇಲ್ಲಿಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.