ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ನ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 558 ಸೀನಿಯರ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳು ಖಾಲಿ ಇವೆ.ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬಿಎಸ್ಎನ್ಎಲ್(BSNL)ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ:
ಟೆಲಿಕಾಂ ಆಪರೇಶನ್ಸ್- 450
ಫೈನಾನ್ಸ್- 84
ಸಿವಿಲ್- 13
ಎಲೆಕ್ಟ್ರಿಕಲ್- 11
ವಿದ್ಯಾರ್ಹತೆ:
ಟೆಲಿಕಾಂ ಆಪರೇಶನ್ಸ್- EEE/ECE/CSE/IT/ ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್
ಫೈನಾನ್ಸ್- ಸಿಎ, ಸಿಎಂಎ
ಸಿವಿಲ್- ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್
ಎಲೆಕ್ಟ್ರಿಕಲ್- ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್
ವಯೋಮಿತಿ:
ಭಾರತ್ ಸಂಚಾರ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ
ವೇತನ:
ಮಾಸಿಕ ₹ 24,900-50,500
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ