ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಡಿತರ ಚೀಟಿ (Ration Card) ಪ್ರಾಮುಖ್ಯತೆ ಹೆಚ್ಚಾಗಿದೆ. ಇನ್ನು ರಾಜ್ಯದ ಅನೇಕ ಜನರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಮಾರ್ಚ್ 31ರೊಳಗಡೆ ಎಲ್ಲಾ ಅರ್ಜಿಯನ್ನು ಪರಿಶೀಲಿಸಿ ಏಪ್ರಿಲ್ 1ರಿಂದ ಹೊಸ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಇಲಾಖೆ ಮಾಹಿತಿ ನೀಡಿದೆ.
ಸದ್ಯ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ದಿನಾಂಕದಿಂದಲೇ ನೀವು ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. ಹೊಸ ಆದ್ಯತಾ ಪಡಿತರ ಚೀಟಿಗಗೆ ಬಂದಿರುವ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಇದುವರೆಗೆ 57,651 ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 744 ಕಾರ್ಡ್ಗಳನ್ನು ವಿತರಿಸಲಾಗಿದೆ. ಬಾಕಿ ಉಳಿದಿರುವ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡುವಂತೆ ಜಂಟಿ/ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇವರು ಮಾತ್ರ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಬಹುದು
- ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು.
- ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು
- ಮತದಾರರ ಗುರುತಿನ ಚೀಟಿ
- ಆಧಾರ್ ಕಾರ್ಡ್
- ವಯಸ್ಸಿನ ಪ್ರಮಾಣಪತ್ರ
- ಚಾಲನಾ ಪರವಾನಿಗೆ
- ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಮೊಬೈಲ್ ನಂ
- ಸ್ವಯಂ ಘೋಷಿತ ಪ್ರಮಾಣಪತ್ರ
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಸರ್ಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಗತ್ಯ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.