ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ ಯೋಜನೆಗೆ(Karnataka Budget 2023) ಅನುಮೋದನೆ ನೀಡಲಾಗಿದೆ. ಕನಕಪುರದಲ್ಲಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಅಸ್ತು ಎನ್ನಲಾಗಿದ್ದು, ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇನ್ನೂ ಜಲಸಂಪನ್ಮೂಲ ಇಲಾಖೆಗೆ 1 ಲಕ್ಷ ಕೋಟಿ ಹಣ ಮೀಸಲಿಡಲಾಗಿದ್ದು, 10 ನೀರಾವರಿ ಯೋಜನೆ ಪೂರ್ಣಗೊಳಿಸಲು 940 ಕೋಟಿ ಮೀಸಲಿಡಲಾಗಿದೆ.
ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಅನುದಾನ ಘೋಷಿಸಲಾಗಿದ್ದು, 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ. 19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲಿಡಲಾಗಿದೆ. ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಸೇರಿ ಒಟ್ಟು 823,99 ಕೆರೆಗಳನ್ನು ತುಂಬಿಸಲು ನಿರ್ಧಾರ ಮಾಡಲಾಗಿದೆ.