ನವದೆಹಲಿ: ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 33 ನೇ ಪುಣ್ಯತಿಥಿ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿಯವರು ʼವೀರ ಭೂಮಿʼಯಲ್ಲಿ ರಾಜೀವ್ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿನ್ ಪೈಲಟ್, ಪಿ ಚಿದಂಬರಂ,
ಕೆಸಿ ವೇಣುಗೋಪಾಲ್ ಸೇರಿದಂತೆ ಇತರ ಹಿರಿಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಕೂಡ ಇವರಿಗೆ ಸಾಥ್ ನೀಡಿದರು. ಇತ್ತ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಕೂಡ ರಾಜೀವ್ ಗಾಂಧಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ನಮ್ಮ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನನ್ನ ನಮನಗಳು ಎಂದು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.