ಬೆಳಗಾವಿ:- ಮಿಸ್ಟರ್ ಕುಮಾರಸ್ವಾಮಿ ಹೆದರಿ ಹೋಗಿದ್ದೀಯಾ!?, ನೀನು ಎಂತ ಸುಳ್ಳುಗಾರ ಎಂದು ಗೊತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಾರೆ.
ಗ್ಯಾರಂಟಿಯಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ HDK ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಕುಮಾರಸ್ವಾಮಿ ಹೇಗಿದ್ದರೂ ಎಂಪಿಯಾಗುವುದಿಲ್ಲ. ಮಿಸ್ಟರ್ ಕುಮಾರಸ್ವಾಮಿ ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ. ಚರ್ಚೆ ಮಾಡಲು ಸದನಕ್ಕೆ ಬಾ. ನೀನು ಎಂತ ಸುಳ್ಳುಗಾರ ಎಂಬುದು ಗೊತ್ತಾಗಲಿದೆ’ ಎಂದರು.
ನಾನು ಕಲ್ಲು ಲೂಟಿ ಮಾಡಿದೆನೋ, ಮೋಸ ಮಾಡಿದೆನೋ ಎಂಬ ಬಗ್ಗೆ ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಬರಲಿ ಎಂದು ಡಿಕೆ ಶಿವಕುಮಾರ್ ಸವಾಲು ಹಾಕಿದರು.
ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೆಚ್ಡಿಕೆ ಹೇಳಿದ್ದಾರೆ. ಇದನ್ನು ನಾವು ಖಂಡಿಸಬೇಕು. ನಾನು ಎಲ್ಲ ಮಹಿಳಾ ಸಂಘಟನೆಗಳಿಗೆ ಕರೆ ಕೊಡ್ತೇನೆ, ನಿಮ್ಮ ಸ್ವಾಭಿಮಾನ ಉಳಿಸಿಕೊಳ್ಳಲು ಪ್ರತಿಭಟನೆ ಮಾಡಿ. ಪ್ರತಿಯೊಂದು ತಾಲೂಕಿನಲ್ಲಿ ಹೋರಾಟ ಮಾಡಬೇಕು. ಒಂದು ಪಕ್ಷದ ಅಧ್ಯಕ್ಷನಾಗಿ ನಾನು ಈ ಕರೆ ಕೊಡ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.