ಬೆಂಗಳೂರು ;– ಆದಾಯಕ್ಕೂ ಹೆಚ್ಚು ಆಸ್ತಿ ಗಳಿಸಿದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಕುಬೇರ ತಹಶೀಲ್ದಾರ್ ಅಜಿತ್ ರೈ ಅವರನ್ನು ಇಂದು ನ್ಯಾಯಾಲಕ್ಕೆ ಲೋಕ ಅಧಿಕಾರಿಗಳು, ಹಾಜರುಪಡಿಸಲಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆ ಒಳಗಾಗಿ ನ್ಯಾಯಾಧೀಶ ರ ಮುಂದೆ ಅಧಿಕಾರಿಗಳು ಹಾಜರುಪಡಿಸಲಿದ್ದು 10 ದಿನ ಅಜಿತ್ ರೈಯನ್ನು ಕಸ್ಟಡಿ ಕೇಳುವ ಸಾಧ್ಯತೆ ಇದೆ. ಹೆಚ್ಚಿನ ವಿಚಾರಣೆ ನಿಟ್ಟಿನಲ್ಲಿ ಕಸ್ಟಡಿ ಕೇಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.