ಕೇಂದ್ರ ಸರ್ಕಾರವು ಕರ್ನಾಟಕದ ಪಾಲಿನ ಹಣವನ್ನು ನೀಡದೆ ಅನ್ಯಾಯ ಎಸಗುತ್ತಿದೆ. ಅನುದಾನ ನೀಡುವ ವಿಚಾರದಲ್ಲಿ ಕೇಂದ್ರದಿಂದ ಸಾಕಷ್ಟು ಅನ್ಯಾಯವಾಗುತ್ತಿದೆ. ಆದರೆ, ಇದನ್ನು ಪ್ರಶ್ನಿಸಲು ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಅವರಿಗೆ ಬಾಯಿ ಬರಲ್ಲ. ಪ್ರತಿಪಕ್ಷ ನಾಯಕ ಆರ್ ಅಶೋಕ್ಗೆ ಈ ಬಗ್ಗೆ ಮಾಹಿತಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದರು. ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ವಿಪಕ್ಷ ನಾಯಕ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ.
ಒಂದು ಸುಳ್ಳನ್ನ ನೂರು ಬಾರಿ ಹೇಳಿದರೆ ಅದು ಸತ್ಯವಾಗುವುದಿಲ್ಲ ಸಿಎಂ ಸಿದ್ದರಾಮಯ್ಯ ಅವರೇ. ಯುಪಿಎ ಅವಧಿಗೆ ಹೋಲಿಸಿದರೆ ಎನ್ಡಿಎ ಅವಧಿಯಲ್ಲಿ ಕರ್ನಾಟಕಕ್ಕೆ ಮೂರು ಪಟ್ಟು ಹೆಚ್ಚು ಹಣ ದೊರೆತಿದೆ ಎನ್ನುವ ಸತ್ಯ ನಿಮಗೂ ಗೊತ್ತು” ಎಂದು ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಹಾಕಿದ್ದಾರೆ.