ಕಾಂಗ್ರೆಸ್ ಸರ್ಕಾರದಿಂದ ಬೆಲೆ ಏರಿಕೆ ಗ್ಯಾರಂಟಿ ಆಗಿದೆ ಎಂದು ಅಶ್ವಥ್ ನಾರಾಯಣ್ ವಾಗ್ದಾಳಿ ಮಾಡಿದ್ದಾರೆ.
ಈ ಸಂಬಂಧ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ನಿಷ್ಠೆಯಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳವನ್ನು ಜನರಿಗೆ ಕೊಡುಗೆಯಾಗಿ ನೀಡಿದೆ.
ಈ ವೇಳೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಇದರ ವಿರುದ್ಧ ಸೋಮವಾರ ಬಿಜೆಪಿ ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್, ಎಲ್ಲಾ ಜಿಲ್ಲಾ ಕೇಂದ್ರಗಳು, ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಆಸ್ತಿ ತೆರಿಗೆ ಹೆಚ್ಚಳ, ಕುಡಿಯುವ ನೀರಿನ ದರ ಏರಿಕೆ, ವಿದ್ಯುತ್ ದರ ಏರಿಕೆ ಮಾಡಿದೆ. ವಾಹನಗಳ ತೆರಿಗೆ, ಆಸ್ತಿ ತೆರಿಗೆಯನ್ನೂ ಹೆಚ್ಚಿಸಿದೆ. ಸಾಲ ಪಡೆಯಲು ಬ್ಯಾಂಕ್ಗೆ ಹೋದರೆ ನೋಂದಣಿ ಶುಲ್ಕವನ್ನೂ ಹೆಚ್ಚಿಸಲಾಗಿದೆ. ಹಣದುಬ್ಬರ, ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸಿನವರು, ಚುನಾವಣೆ ವೇಳೆ ಬೆಲೆ ಇಳಿಸುವ ಭರವಸೆ ಕೊಟ್ಟಿದ್ದರು. ಇದೀಗ ರಾಜ್ಯದ ಜನತೆಗೆ ಕಾಂಗ್ರೆಸ್ಸಿನವರು ಬೆಲೆ ಏರಿಕೆಯ ಗ್ಯಾರಂಟಿ ಕೊಟ್ಟಿದ್ದಾರೆ. ಏರಿಸಿದ ದರವನ್ನು ಸಂಪೂರ್ಣವಾಗಿ ಹಿಂದಕ್ಕೆ ಪಡೆಯಬೇಕು ಎಂದು ಅವರು ಪೆಟ್ರೋಲ್ ಬೆಲೆ 3ರೂ. ಮತ್ತು ಡೀಸೆಲ್ ಬೆಲೆ 3.50ರೂ ಏರಿಸಿದ್ದಾರೆ. ಕರ್ನಾಟಕ ಸೇಲ್ಸ್ ಟ್ಯಾಕ್ಸ್ನ್ನು 26% ರಿಂದ 30%ಗೆ ಏರಿಸಿದ್ದಾರೆ. ಡೀಸೆಲ್ ತೆರಿಗೆಯನ್ನು 14% ರಿಂದ 18%ಗೆ ಏರಿಸಿದ್ದಾರೆ. ಹಿಂದೆ 1ರೂ. ಹೆಚ್ಚಳ ಮಾಡಿದ್ದಾಗ ಹಣಕಾಸು ಸಚಿವ, ಆರ್ಥಿಕ ತಜ್ಞರಾಗಿ ಸಿದ್ದರಾಮಯ್ಯನವರು ಎಲ್ಲಾ ವಸ್ತುಗಳ ಬೆಲೆ ಏರಿಕೆ ಆಗಲಿದೆ ಎಂದು ಪ್ರಬಲವಾಗಿ ವಿರೋಧಿಸಿದ್ದರು. ನಾಚಿಕೆ ಆಗಲ್ವ ಎಂಬ ಭಾಷೆಯನ್ನೂ ಬಳಸಿದ್ದರು. ಇವತ್ತು ವಿದ್ಯುತ್ ದರವನ್ನು 100% ನಿಂದ 150%ರಷ್ಟು ಏರಿಸಿದ್ದಾರೆ. ಯಾವ ರೀತಿ ಇವರು ಸಮಜಾಯಿಷಿ ಕೊಡುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ