ಇಂದಿಗೂ ಲಕ್ಷಾಂತರ ಮಂದಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಲ್ಲಿದ್ದಾರೆ. ಅಂತೆಯೇ ಪುನೀತ್ ಪತ್ನಿ ಅಶ್ವಿನಿ ಪತಿಯ ನೆನಪಿನಲ್ಲೇ ಜೀವನ ನಡೆಸುತ್ತಿದ್ದಾರೆ. ಅಪ್ಪು ಎಂದೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತ ಎಂದು ಅಶ್ವಿನಿ ಪುನೀತ್ ರಾಜ್ಕುಮಾರ್ ಹೇಳಿಕೊಂಡಿದ್ದಾರೆ.
ಅಪ್ಪು ಅವರು ತಮ್ಮ ಅಪ್ರತಿಮ ಪ್ರತಿಭೆ, ಕರುಣೆ ಮತ್ತು ಮಾನವೀಯತೆಯಿಂದ ನಮ್ಮ ಹೃದಯಾಂತರಾಳವನ್ನು ಬೆಳಗಿಸುತ್ತಲೇ ಇದ್ದಾರೆ. ಅಪ್ಪು ಅವರು ಮಾನವೀಯತೆಯಲ್ಲಿ ಇರಿಸಿದ್ದ ಅಚಲ ಬದ್ಧತೆ ಅವರ ಹಾದಿಯಲ್ಲಿ ನಡೆಯಲು ನಮಗೆ ಸದಾ ಸ್ಫೂರ್ತಿದಾಯಕವಾಗಿರುತ್ತದೆ ಎಂದು ಅಪ್ಪು ಕುರಿತು ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಪೋಸ್ಟ್ ಮಾಡಿದ್ದಾರೆ.
ಪುನೀತ್ ನಿಧನದ ಬಳಿಕ ಪ್ರತಿಯೊಂದರ ಜವಬ್ದಾರಿಯನ್ನು ಅಶ್ವಿನಿ ನಿಭಾಯಿಸುತ್ತಿದ್ದಾರೆ. ಪಿಆರ್ಕೆ ಸಂಸ್ಥೆ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದಾರೆ. ಈ ಮೂಲಕ ಅಶ್ವಿನಿ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದು ಅಪ್ಪು ಕನಸನ್ನು ನನಸು ಮಾಡುತ್ತಿದ್ದಾರೆ.