ಕನ್ನಡದ ಖ್ಯಾತ ಯೂಟ್ಯೂಬರ್ ಸ್ಟ್ರಾಂಗ್ ಸುಧಾಕರ್ ಅಲಿಯಾಸ್ ಸುಧಾಕರ್ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ಪ್ರಕರಣದ ಸಂಬಂಧ ಸುಧಾಕರ್ ಗೌಡ ಅವರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಈ ಹಿಂದೆ ಹಲ್ಲೆ ಪ್ರಕರಣವೊಂದರಲ್ಲಿ ಸುಧಾಕರ್ ಗೌಡ ಭಾಗಿಯಾಗಿದ್ದರು. ಆ ಪ್ರಕರಣ ಸಂಬಂಧ ಸುಧಾಕರ್ ವಿರುದ್ಧ ವಾರೆಂಟ್ ಇಶ್ಯೂ ಮಾಡಲಾಗಿತ್ತು. ಅಲ್ಲದೇ ಮಾರ್ಟಿನ್ ಸಿನಿಮಾದ ರಿವ್ಯೂವ್ ಮಾಡಿದ್ದ ಸುಧಾಕರ್ ವಿವಾದ ಮಾಡಿಕೊಂಡಿದ್ದರು. ಸಿನಿಮಾ ಚೆನಾಗಿಲ್ಲ. ಕಥೆ ಚೆನ್ನಾಗಿಲ್ಲ ಅಂತಾ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಬೆನ್ನಲ್ಲೇ ಧ್ರುವ ಸರ್ಜಾ ಫ್ಯಾನ್ಸ್ ಮಾದನಾಯಕನಹಳ್ಳಿ ಠಾಣೆಗೆ ದೂರು ನೀಡಿದ್ದಾರೆ.ಈ ಎಲ್ಲಾ ಕಾರಣಗಳಿಂದ ಸ್ಟ್ರಾಂಗ್ ಸುಧಾಕರ್ ಅವರನ್ನು ಬಂಧಿಸಲಾಗಿದೆ.
ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಸುಧಾಕರ್ ವಿಚಾರಣೆ ನಡೆಸಿದ್ದು ಅಪಾಲಜಿ ಲೆಟರ್ ಬರೆಸಿಕೊಂಡು ವಿಡಿಯೋ ಡಿಲೀಟ್ ಮಾಡಿಸಿದ್ದಾರೆ. ಹಲ್ಲೆ ಪ್ರಕರಣ ಸಂಬಂಧ ಸುಧಾಕರ್ ಗೌಡನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.