ಮಂಗಳವಾರ ಮ್ಯಾನ್ಮಾರ್ ಸೇನೆಯು ನಡೆಸಿದ ವೈಮಾನಿಕ ದಾಳಿಯಲ್ಲಿ ಹಲವು ಮಕ್ಕಳು ಸೇರಿದಂತೆ 100 ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದಾಗಿ ಸ್ಥಳೀಯ ಮಾದ್ಯಮಗಳು ವರದಿ ಮಾಡಿವೆ.
ಮಿಲಿಟರಿ ಆಡಳಿತದ ವಿರೋಧಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂಬ ಕಾರಣಕ್ಕೆ ಸೇನೆಯು ಮನಬಂದಂತೆ ದಾಳಿ ನಡೆಸಿದ್ದು ದಾಳಿಯಲ್ಲಿ 100 ಕ್ಕೂ ಹೆಚ್ಚು ಮಂದಿ ಮೃತಟ್ಟಿದ್ದಾರೆ.
ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ವೇದಾಂತ್ ಪಟೇಲ್ ಪ್ರತಿಕ್ರಿಯಿಸಿದ್ದು, ಹಿಂಸಾತ್ಮಕ ದಾಳಿಗಳ ಆಡಳಿತವು ಮಾನವ ಜೀವನವನ್ನು ಕಡೆಗಣಿಸುತ್ತದೆ. ಅಂತಹ ಆಡಳಿತವನ್ನು ಬಲವಾಗಿ ಖಂಡಿಸುತ್ತೇವೆ ಎಂದಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್, ವೈಮಾನಿಕ ದಾಳಿಯಿಂದ ನನಗೆ ಗಾಬರಿಯಾಗಿದೆ. ವಿಶ್ವದ ಎಲ್ಲಾ ದೇಶಗಳು ದಾಳಿಯ ಹೊಣೆಗಾರರನ್ನು ಖಂಡಿಸಿ ನ್ಯಾಯಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.