ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ್ದರಿಂದ ಆಕ್ರೋಶಗೊಂಡ ಮುಸ್ಲಿಂ ಯುವಕರ ಗುಂಪೊಂದು ಅಭಿಲಾಷ್ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ.
ಹೀಗಾಗಿ ಹಲ್ಲೆ ಖಂಡಿಸಿ ಇಂದು ಹಿಂದೂಪರ ಸಂಘಟನೆಗಳಿಂದ ಬೆಳ್ಳೂರು ಪಟ್ಟಣ ಬಂದಗೆ ಕರೆ ನೀಡಲಾಗಿದೆ. ಬೆಳ್ಳೂರು ಪಟ್ಟಣದ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಸಿದ್ದತೆ ನಡೆಸಲಾಗಿದೆ. ಹಲ್ಲೆ ನಡೆಸಿರುವವರ ಬಂಧನಕ್ಕೆ ಆಗ್ರಹಿಸಿ ಕಾರ್ಯಕರ್ತರು ಕ್ರಮಕ್ಕೆ ಒತ್ತಾಯಿಸಲಿದ್ದಾರೆ. ಬೆಳ್ಳೂರು ಪಟ್ಟಣದ ಬಂದ್ ಗೆ ಕರೆ ಹಿನ್ನಲೆ ಪಟ್ಟಣದಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದಲ್ಲಿರುವ ಪೊಲೀಸ್ ಠಾಣೆಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಇನ್ನೂ ಮುಸ್ಲಿಂ ಯುವಕರ ಗುಂಪು ಅಭಿಲಾಷ್ ಮೇಲೆ ಹಲ್ಲೆ ನಡೆಸಿದ್ದು ಇದನ್ನು ತಡೆಯಲು ಬಂದ ಹಿಂದೂ ಯುವಕರ ಮೇಲೆ ಗುಂಪು ಹಲ್ಲೆ ಮಾಡಿದೆ. ಅಷ್ಟೇ ಅಲ್ಲದೆ ಹಿಂದೂ ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಬೆದರಿಕೆ ಹಾಕಿದ್ದು ಸದ್ಯ ಬೆಳ್ಳೂರಿನಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಹಲ್ಲೆಯಿಂದ ಗಾಯಗೊಂಡಿರುವ ಅಭಿಲಾಷ್ ಅವರನ್ನು ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಬಳಿಕ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಟಾಗಿದ್ದು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಶ್ರಮ ವಹಿಸುತ್ತಿದ್ದಾರೆ.