ಕಲಬುರ್ಗಿ:– ಕೇಂದ್ರದಿಂದ ವಿಪಕ್ಷಗಳ ಒಗ್ಗಟ್ಟು ಒಡೆಯಲು ಯತ್ನಿಸಲಾಗುತ್ತಿದೆ ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ. ಈ ಸಂಬಂಧ ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದವರನ್ನು ದಮನಿಸಲಾಗುತ್ತದೆ. ಆದರೆ ಈ ಬೆದರಿಕೆಗಳಿಗೆಲ್ಲ ವಿರೋಧ ಪಕ್ಷಗಳು ಬಗ್ಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಮಣಿಪುರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ.
ಮೊದಲೇ ಕೇಂದ್ರ ಸರ್ಕಾರ ಅದನ್ನು ಹತೋಟಿಗೆ ತಂದಿದ್ರೆ ಪ್ರಾಣಹಾನಿ ಸಂಭವಿಸುತ್ತಿರಲಿಲ್ಲ. ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಲೇ ಮಣಿಪುರದಲ್ಲಿ ಹಿಂಸಾಚಾರ ಉಲ್ಬಣಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು. ಈಗಾಗಲೇ ರಾಷ್ಟ್ರಪತಿಯವರಿಗೆ ನಿಯೋಗದ ಮೂಲಕ ಹೋಗಿ ಅಲ್ಲಿನ ಸ್ಥಿತಿ ಗತಿಯ ಬಗ್ಗೆ ತಿಳಿಸಿದ್ದೇವೆ. ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ಪರಿಸ್ಥಿತಿ ಇಷ್ಟೊಂದು ಹದಗೆಟ್ಟಿದೆ.
ಇನ್ನೂ ವಿರೋಧ ಪಕ್ಷಗಳ ಒಗ್ಗಟ್ಟು ಒಡೆಯಲು ಕೇಂದ್ರ ಸರ್ಕಾರ ಯತ್ನಿಸುತ್ತಿದ್ದು, ನಮ್ಮ ವಿರುದ್ಧ ಸೇಡು ತೀರಿಸಿಕೊಳ್ಳಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದೆ.