ತುಮಕೂರು: ಇನ್ನೆರಡು ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಘೋಷಣೆ ಆಗಲಿದೆ. ಯಾರ ಮೇಲೆ ವಿಶ್ವಾಸ ಇದೆಯೋ ಅಂತಹ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಿಗಲಿದೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ (Dr G Parameshwara) ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನಿಭಾಯಿಸುತ್ತೇನೆ ಎಂದರು. ಹಾಲಿನ ಪ್ರೋತ್ಸಾಹಧನ ಕಡಿಮೆ ಮಾಡಿದ ವಿಚಾರವಾಗಿ ಮಾತನಾಡಿದ ಅವರು,
ಕೆಲವು ಒಕ್ಕೂಟಗಳು ಹಾಲಿನ ಪೋತ್ಸಾಹಧನ ಕಡಿಮೆ ಮಾಡಿವೆ. ಆದರೆ ಸರ್ಕಾರ ಕೊಡುವ ಪ್ರೋತ್ಸಾಹಧನ ಕಡಿಮೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜುಲೈನಲ್ಲಿ ಬಜೆಟ್ ಮಂಡನೆಯಾಗಲಿದೆ ಎಂದು ಹೇಳಿದ ಪರಮೇಶ್ವರ್, ಎತ್ತಿನಹೊಳೆ ಯೋಜನೆ 2 ವರ್ಷದಲ್ಲಿ ಪೂರ್ಣಗೊಳಿಸಲು ಪ್ರಯತ್ನ ಮಾಡಲಾಗುವುದು. ಔರಾದ್ಕರ್ ವರದಿ ಬಗ್ಗೆ ಪರಿಶೀಲನೆ ಮಾಡಲಾಗುವುದು. ಪೊಲೀಸರಿಗೆ ಹೆಚ್ಚು ದಂಡ ವಸೂಲಿಗೆ ಯಾವ ಟಾರ್ಗೆಟ್ ನೀಡಿಲ್ಲ ಎಂದರು.