ಆಸ್ಟ್ರೇಲಿಯಾದಲ್ಲಿ ನಡೆದ ಭಾರತೀಯ ವಿದ್ಯಾರ್ಥಿಗಳ ನಡುವಿನ ಜಗಳದಲ್ಲಿ 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಇರಿದು ಕೊಲ್ಲಲಾಗಿದೆ.
ನವಜೀತ್ ಸಂಧು ಮೃತ ವಿದ್ಯಾರ್ಥಿ. ಬಾಡಿಗೆ ವಿಚಾರದಲ್ಲಿ ಕೆಲವು ಭಾರತೀಯ ವಿದ್ಯಾರ್ಥಿಗಳ ನಡುವೆ ನಡೆದ ವಿವಾದದಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಇನ್ನೊಬ್ಬ ವಿದ್ಯಾರ್ಥಿಯು ಚಾಕುವಿನಿಂದ ನವಜೀತ್ ಸಂಧು ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ನವಜೀತ್ ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೆಲ್ಬೋರ್ನ್ನಲ್ಲಿ ಸ್ಥಳೀಯ ಕಾಲಮಾನ ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದ್ದು ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾನೆ ಎಂದು ಮೃತ ವಿದ್ಯಾರ್ಥಿಯ ಚಿಕ್ಕಪ್ಪ ತಿಳಿಸಿದ್ದಾರೆ. ನವಜೀತ್ನ ಸ್ನೇಹಿತ (ಮತ್ತೊಬ್ಬ ಭಾರತೀಯ ವಿದ್ಯಾರ್ಥಿ) ಬಳಿ ಕಾರು ಇತ್ತು. ಹೀಗಾಗಿ ಆತನ ಸಾಮಾನುಗಳನ್ನು ತೆಗೆದುಕೊಳ್ಳಲು ಸ್ನೇಹಿತನ ಜೊತೆಗೆ ಕಾರಿನಲ್ಲಿ ಆತನ ಮನೆಗೆ ಹೋಗಿದ್ದಾನೆ.
ಅವನ ಸ್ನೇಹಿತ ಒಳಗೆ ಹೋದಾಗ, ನವಜೀತ್ ಗೆ ಚೀರಾಡುವ ಕೂಗುಗಳನ್ನು ಕೇಳಿಸಿಕೊಂಡು ಒಳ ಹೋಗಿದ್ದಾನೆ. ಜಗಳವಾಡಬೇಡಿ ಎಂದು ನವಜೀತ್ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಆತನ ಎದೆಗೆ ಚಾಕುವಿನಿಂದ ಮಾರಣಾಂತಿಕವಾಗಿ ಇರಿದಿದ್ದಾನೆ ಎಂದು ಯಶ್ವಿರ್ ಹೇಳಿದರು.
ನವಜೀತ್ ಅವರಂತೆ ಆರೋಪಿಯೂ ಕೂಡ ಕರ್ನಾಲ್ ಮೂಲದವನಾಗಿದ್ದಾನೆ. ಭಾನುವಾರ ಮುಂಜಾನೆ ಘಟನೆಯ ಬಗ್ಗೆ ಕುಟುಂಬಕ್ಕೆ ಮಾಹಿತಿ ಸಿಕ್ಕಿದೆ ಎಂದು ಯಶ್ವಿರ್ ಹೇಳಿದ್ದಾರೆ. ಘಟನೆಯಲ್ಲಿ ನವಜೀತ್ ಅವರ ಜೊತೆಗಿದ್ದ ಸ್ನೇಹಿತನಿಗೂ ಗಾಯಗಳಾಗಿವೆ ಎಂದು ಮೃತರ ಚಿಕ್ಕಪ್ಪ ತಿಳಿಸಿದ್ದಾರೆ.
ನವಜೀತ್ ಒಂದೂವರೆ ವರ್ಷಗಳ ಹಿಂದೆ ಸ್ಟಡಿ ವೀಸಾದ ಮೇಲೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು ಮತ್ತು ಕೃಷಿಕರಾಗಿರುವ ಅವರ ತಂದೆ ಅವರ ಶಿಕ್ಷಣಕ್ಕಾಗಿ ತಮ್ಮ ಒಂದೂವರೆ ಎಕರೆ ಜಮೀನನ್ನು ಮಾರಾಟ ಮಾಡಿದ್ದರು ಮೃತ ನವಜೀತ್ ಚಿಕ್ಕಪ್ಪ ಹೇಳಿದ್ದಾರೆ.