ಆಸ್ಟ್ರೇಲಿಯಾ ತಂಡ ಏಕದಿನ ವಿಶ್ವಕಪ್ನ ಫೈನಲ್ಗೇರಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಗುರುವಾರ ನಡೆದ ಸೌತ್ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ತಂಡವು ಏಕದಿನ ವಿಶ್ವಕಪ್ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ರೋಚಕ ಜಯ ಸಾಧಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡ 49.4 ಓವರ್ಗಳಲ್ಲಿ 212 ರನ್ಗಳಿಸಿ ಆಲೌಟ್ ಆಯಿತು.
213 ರನ್ಗಳ ಸುಲಭ ಗುರಿ ಪಡೆದ ಆಸ್ಟ್ರೇಲಿಯಾ ತಂಡವು 193 ರನ್ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇದಾಗ್ಯೂ ಅಂತಿಮ ಹಂತದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಪ್ಯಾಟ್ ಕಮಿನ್ಸ್ ಹಾಗೂ ಮಿಚೆಲ್ ಸ್ಟಾರ್ಕ್ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡ 3 ವಿಕೆಟ್ಗಳ ರೋಚಕ ಜಯ ಸಾಧಿಸಿದೆ.
ಈ ಗೆಲುವಿನೊಂದಿಗೆ ಫೈನಲ್ಗೆ ಪ್ರವೇಶಿಸಿರುವ ಆಸ್ಟ್ರೇಲಿಯಾ ತಂಡವು ನವೆಂಬರ್ 19 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿಯಲಿದೆ.
ಏಕದಿನ ಕ್ರಿಕೆಟ್ನಲ್ಲಿ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು 110 ಬಾರಿ ಮುಖಾಮುಖಿಯಾಗಿವೆ. ಈ ವೇಳೆ 55 ಪಂದ್ಯಗಳಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದರೆ, 51 ಮ್ಯಾಚ್ಗಳಲ್ಲಿ ಆಸ್ಟ್ರೇಲಿಯಾ ಗೆಲುವು ದಾಖಲಿಸಿದೆ. ಇನ್ನು 3 ಮ್ಯಾಚ್ಗಳು ಕಾರಣಾಂತರಗಳಿಂದ ರದ್ದಾದರೆ, 1 ಪಂದ್ಯ ಟೈ ಆಗಿತ್ತು.